Home Churches About
 

೨ ಕೊರಿಂಥದವರಿಗೆ

Chapter 1

1. ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
2. ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3. ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
4. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
5. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
6. ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
7. ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
8. ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
9. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
10. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
11. ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
12. ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
13. ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.
14. ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.
15. ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
16. ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
17. ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
18. ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
19. ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
20. ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್‌ ಆಗಿವೆ.
21. ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
22. ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
23. ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.
24. ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.

Chapter 2

1. ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.
2. ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ.
3. ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
4. ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
5. ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
6. ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
7. ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
8. ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
9. ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
10. ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
11. ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
12. ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
13. ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
14. ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
15. ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
16. ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?
17. ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.

Chapter 3

1. ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
2. ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
3. ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
4. ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು.
5. ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;
6. ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
7. ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
8. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
9. ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
10. ಈಗ ಅತ್ಯಧಿಕವಾದ ಪ್ರಭಾವವುಳ್ಳದ್ದು ಬಂದದ್ದರಿಂದ ಪ್ರಭಾವವಾಗಿದ್ದದ್ದು ಈ ವಿಷಯದಲ್ಲಿ ಪ್ರಭಾವ ವಿಲ್ಲದ್ದಾಯಿತು.
11. ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
12. ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
13. ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
14. ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
15. ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
16. ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
17. ಕರ್ತನು ಆ ಆತ್ಮನೇ ಆಗಿದ್ದಾನೆ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.
18. ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.

Chapter 4

1. ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
2. ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
3. ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
4. ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
5. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
6. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
7. ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
8. ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
9. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
10. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
11. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
12. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ.
13. ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ.
14. ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
15. ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
16. ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
17. ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.
18. ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.

Chapter 5

1. ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
2. ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
3. ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
4. ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
5. ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
6. ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ;
7. (ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
8. ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
9. ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
10. ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
11. ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
12. ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿ ಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹೊಗಳಿಕೊಳ್ಳದೆ ತೋರಿಕೆಯ ವಿಷಯದಲ್ಲಿ ಮಾತ್ರ ಹೊಗಳಿಕೊಳ್ಳುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳು ವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯ ದಲ್ಲಿ ಹೆಚ್ಚಳಪಡುವದಕ್ಕೆ ನಿಮಗೆ
13. ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.
14. ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
15. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
16. ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
17. ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
18. ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
19. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
20. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
21. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

Chapter 6

1. ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
2. (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
3. ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
4. ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
5. ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
6. ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
7. ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
8. ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
9. ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
10. ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
11. ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
12. ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
13. ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
14. ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
15. ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?
16. ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
17. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.
18. ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

Chapter 7

1. ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
2. ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
3. ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.
4. ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
5. ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
6. ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
7. ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.
8. ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.
9. ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
10. ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
11. ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
12. ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
13. ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
14. ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
15. ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.
16. ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.

Chapter 8

1. ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
2. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
3. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
4. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
5. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
6. ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
7. ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
8. ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
9. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
10. ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
11. ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
12. ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
13. ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.
14. ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
15. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
16. ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
17. ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
18. ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
19. ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
20. ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
21. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
22. ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
23. ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.
24. ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.

Chapter 9

1. ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
2. ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
3. ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
4. ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
5. ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
6. ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
7. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
8. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
9. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
10. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
11. ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
12. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
13. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
14. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.
15. ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.

Chapter 10

1. ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
2. ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
3. ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
4. (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
5. ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
6. ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
7. ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
8. ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
9. ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ.
10. ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
11. ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
12. ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿ ಕೊಳ್ಳುವದಕ್ಕಾಗಲಿ ನಮಗೆ ಧೈರ್ಯ ಸಾಲದು; ಅವರಂತೂ ತಮ್ಮೊಳಗೆ ತಮ್ಮ ತಮ್ಮನ್ನು ಅಳತೆ ಮಾಡಿಕೊಂಡು ತಮತಮಗೆ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
13. ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.
14. ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ.
15. ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;
16. ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
17. ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.
18. ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.

Chapter 11

1. ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
2. ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
3. ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
4. ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
5. ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
6. ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
7. ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
8. ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
9. ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
10. ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
11. ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
12. ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
13. ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
14. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
15. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
16. ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
17. ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
18. ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
19. ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
20. ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
21. ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
22. ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
23. ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
24. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
25. ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
26. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
27. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
28. ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
29. ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
30. ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
31. ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
32. ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.
33. ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.

Chapter 12

1. ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
2. ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
3. ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
4. ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
5. ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ.
6. ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
7. ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
8. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
9. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
10. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
11. ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
12. ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
13. ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
14. ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
15. ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
16. ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.
17. ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
18. ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
19. ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
20. ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬ
21. ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.

Chapter 13

1. ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
2. ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
3. ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
4. ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
5. ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
6. ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.
7. ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
8. ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.
9. ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
10. ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
11. ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
12. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
13. ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
14. ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.


Free counters!   Site Meter(April28th2012)