Home Churches About
 

Chapter 1

1. ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
2. ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.
3. ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.
4. ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ
5. ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
6. ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
7. ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
8. ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
9. ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
10. ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
11. ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
12. ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
13. ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
14. ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
15. ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
16. ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
17. ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
18. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.
19. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

Chapter 2

1. ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
2. ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
3. ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
4. ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
5. ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
6. ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
7. ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
8. ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
9. ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
10. ಕಿತ್ತೀಮ್‌ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
11. ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
12. ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
13. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
14. ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
15. ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
16. ನೋಫ್‌ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
17. ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
18. ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
19. ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
20. ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
21. ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
22. ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
23. ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
24. ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
25. ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
26. ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
27. ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
28. ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
29. ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರು ನನಗೆ ವಿರೋಧವಾಗಿ ದ್ರೋಹಮಾಡಿ ದ್ದೀರಿ ಎಂದು ಕರ್ತನು ಅನ್ನುತ್ತಾನೆ.
30. ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
31. ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
32. ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
33. ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
34. ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
35. ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
36. ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.
37. ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

Chapter 3

1. ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
2. ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
3. ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
4. ಈಗಿನಿಂದಲೇ ನನಗೆ --ನನ್ನ ತಂದೆಯೇ, ನನ್ನ ಯೌವನದ ಮಾರ್ಗ ದರ್ಶಕನು ನೀನೇ ಎಂದು ನೀನು ಕೂಗುವದಿಲ್ಲವೋ?
5. ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.
6. ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
7. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.
8. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
9. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
10. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
11. ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
12. ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.
13. ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
14. ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
15. ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
16. ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
17. ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
18. ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
19. ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
20. ನಿಶ್ಚಯವಾಗಿ ಹೆಂಡತಿಯು ತನ್ನ ಗಂಡನನ್ನು ವಂಚಿಸಿ ಬಿಡುವ ಪ್ರಕಾರ ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
21. ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
22. ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
23. ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
24. ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.
25. ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.

Chapter 4

1. ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
2. ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
3. ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
4. ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
5. ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
6. ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
7. ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
8. ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
9. ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
10. ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
11. ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
12. ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
13. ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
14. ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
15. ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
16. ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
17. ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
18. ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
19. ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
20. ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
21. ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
22. ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
23. ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
24. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
25. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
26. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
27. ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
28. ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
29. ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
30. ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
31. ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.

Chapter 5

1. ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
2. ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
3. ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
4. ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.
5. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
6. ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
7. ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
8. ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.
9. ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
10. ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
11. ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.
12. ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
13. ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
14. ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
15. ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
16. ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
17. ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
18. ಆದಾಗ್ಯೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣ ವಾಗಿ ಅಳಿಸಿಬಿಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
19. ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
20. ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
21. ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
22. ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
23. ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು; ಅವರು ತಿರುಗಿ ಬಿದ್ದು ಹೋಗಿಬಿಟ್ಟಿದ್ದಾರೆ.
24. ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
25. ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.
26. ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
27. ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
28. ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
29. ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
30. ಆಶ್ಚರ್ಯವೂ ಭಯಂಕರವೂ ಆದ ಕಾರ್ಯವು ದೇಶದಲ್ಲಿ ನಡೆಯು ತ್ತದೆ,
31. ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?

Chapter 6

1. ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
2. ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
3. ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
4. ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
5. ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
6. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
7. ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
8. ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
9. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
10. ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
11. ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
12. ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
13. ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
14. ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
15. ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
16. ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
17. ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
18. ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.
19. ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
20. ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
21. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
22. ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
23. ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
24. ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
25. ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
26. ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
27. ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
28. ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
29. ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;
30. ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.

Chapter 7

1. ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--
2. ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
3. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆ ಮಾಡಿರಿ; ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
4. ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
5. ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
6. ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
7. ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
8. ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
9. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
10. ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
11. ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
12. ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
13. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
14. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
15. ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
16. ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
17. ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸ ಲೇಮಿನ ಬೀದಿಗಳಲ್ಲಿಯೂ ಅವರು ಮಾಡುವದನ್ನು ನೀನು ನೋಡುವದಿಲ್ಲವೋ? ಆಕಾಶದ ರಾಣಿಗೆ ದೋಸೆಗಳನ್ನು ಮಾಡುವದಕ್ಕೂ ಬೇರೆ ದೇವರುಗಳಿಗೆ ಪಾನದರ್ಪಣೆಯನ್ನು ಹೊಯ್ಯುವದಕ್ಕೂ
18. ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
19. ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
20. ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
21. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
22. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
23. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
24. ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
25. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
26. ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
27. ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
28. ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
29. ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
30. ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
31. ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
32. ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
33. ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
34. ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.

Chapter 8

1. ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು.
2. ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
3. ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
4. ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
5. ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
6. ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
7. ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
8. ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
9. ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
10. ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
11. ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
12. ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
13. ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
14. ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
15. ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
16. ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
17. ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
18. ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
19. ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
20. ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
21. ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.
22. ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?

Chapter 9

1. ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
2. ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
3. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
4. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
5. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
6. ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
7. ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
8. ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
9. ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
10. ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
11. ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
12. ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
13. ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
14. ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.
15. ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಅವರಿಗೆ, ಹೌದು, ಈ ಜನರಿಗೆ, ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡು ತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡು ತ್ತೇನೆ.
16. ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
17. ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
18. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
19. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
20. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
21. ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
22. ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
23. ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
24. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
25. ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂ
26. ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.

Chapter 10

1. ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
2. ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
3. ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
4. ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
5. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
6. ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
7. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
8. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
9. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
10. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
11. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
12. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
13. ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
14. ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
15. ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
16. ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್‌ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
17. ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು.
18. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
19. ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
20. ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
21. ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
22. ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
23. ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
24. ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.
25. ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.

Chapter 11

1. ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ;
2. ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
3. ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
4. ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
5. ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
6. ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
7. ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
8. ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
9. ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
10. ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
11. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
12. ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
13. ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
14. ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
15. ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
16. ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
17. ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
18. ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
19. ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
20. ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
21. ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
22. ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.
23. ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.

Chapter 12

1. ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
2. ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
3. ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
4. ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
5. ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್‌ ದಡವಿಾರು ವಾಗ ಏನು ಮಾಡುವಿ?
6. ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
7. ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
8. ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
9. ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
10. ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
11. ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
12. ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
13. ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
14. ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
15. ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
16. ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.
17. ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.

Chapter 13

1. ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
2. ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
3. ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ
4. ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್‌ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.
5. ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್‌ ಬಳಿ ಯಲ್ಲಿ ಅಡಗಿಸಿದೆನು.
6. ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್‌ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
7. ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
8. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
9. ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
10. ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
11. ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
12. ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
13. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
14. ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
15. ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
16. ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
17. ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
18. ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
19. ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
20. ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
21. ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
22. ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
23. ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
24. ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
25. ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
26. ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.
27. ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?

Chapter 14

1. ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
2. ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.
3. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
4. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
5. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
6. ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
7. ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
8. ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
9. ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
10. ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ , ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
11. ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
12. ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
13. ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
14. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
15. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
16. ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
17. ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
18. ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
19. ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
20. ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
21. ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.
22. ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.

Chapter 15

1. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
2. ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
3. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
4. ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
5. ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
6. ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
7. ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
8. ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
9. ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
10. ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
11. ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
12. ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
13. ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
14. ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
15. ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
16. ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
17. ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
18. ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
19. ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
20. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
21. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.

Chapter 16

1. ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
2. ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
3. ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
4. ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
5. ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
6. ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
7. ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
8. ಅವರ ಸಂಗಡ ಕೂತುಕೊಂಡು ಉಣ್ಣುವದಕ್ಕೂ ಕುಡಿಯುವದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸ ಬೇಡ.
9. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
10. ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
11. ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.
12. ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
13. ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
14. ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
15. ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
16. ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
17. ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
18. ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
19. ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
20. ಮನು ಷ್ಯನು ದೇವರಲ್ಲದ ದೇವರುಗಳನ್ನು ತನಗೆ ಮಾಡು ವದುಂಟೇ?
21. ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.

Chapter 17

1. ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
2. ಅವರ ಮಕ್ಕಳು ಅವರ ಬಲಿಪೀಠಗ ಳನ್ನೂ ಹಸುರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ತೋಪುಗಳನ್ನೂ ಜ್ಞಾಪಕಮಾಡಿಕೊಳ್ಳುತ್ತಾರಲ್ಲಾ.
3. ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
4. ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
5. ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
6. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
7. ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
8. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
9. ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
10. ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
11. ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
12. ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
13. ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
14. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
15. ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
16. ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
17. ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು.
18. ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
19. ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
20. ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ.
21. ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
22. ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
23. ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
24. ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ
25. ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು.
26. ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್‌ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.
27. ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.

Chapter 18

1. ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
2. ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ.
3. ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು.
4. ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
5. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
6. ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
7. ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
8. ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
9. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
10. ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
11. ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
12. ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
13. ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
14. ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
15. ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
16. ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
17. ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
18. ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
19. ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
20. ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
21. ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
22. ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.
23. ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.

Chapter 19

1. ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು
2. ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
3. ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್‌ಗುಟ್ಟುವವು.
4. ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
5. ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
6. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
7. ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
8. ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
9. ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
10. ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,
11. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
12. ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
13. ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
14. ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--
15. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.

Chapter 20

1. ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
2. ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
3. ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್‌ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.
4. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
5. ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
6. ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
7. ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ.
8. ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
9. ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
10. ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
11. ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
12. ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
13. ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
14. ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
15. ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
16. ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ
17. ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.
18. ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?

Chapter 21

1. ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
2. ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
3. ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
4. ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
5. ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
6. ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
7. ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
8. ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
9. ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
10. ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
11. ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು--
12. ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
13. ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
14. ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.

Chapter 22

1. ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಅಲ್ಲಿ ಈ ವಾಕ್ಯವನ್ನು ಹೇಳು.
2. ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
3. ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
4. ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
5. ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
6. ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
7. ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
8. ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
9. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
10. ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
11. ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.
12. ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
13. ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
14. ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
15. ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
16. ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
17. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
18. ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
19. ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
20. ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
21. ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
22. ನಿನ್ನ ಕುರುಬರನ್ನೆಲ್ಲಾ ಗಾಳಿ ತಿಂದುಬಿಡುವದು; ನಿನ್ನ ಪ್ರಿಯರು ಸೆರೆಗೆ ಹೋಗುವರು; ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ ಅವಮಾನವೂ ಆಗುವದು.
23. ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
24. ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
25. ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
26. ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.
27. ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.
28. ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
29. ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.
30. ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.

Chapter 23

1. ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
2. ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
3. ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
4. ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
5. ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
6. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
7. ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
8. ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
9. ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
10. ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
11. ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
12. ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
13. ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
14. ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
15. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
16. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
17. ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
18. ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
19. ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
20. ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
21. ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
22. ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
23. ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
24. ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
25. ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
26. ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;
27. ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
28. ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
29. ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
30. ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
31. ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
32. ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
33. ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
34. ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.
35. ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
36. ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
37. ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
38. ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
39. ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.
40. ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.

Chapter 24

1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
2. ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
3. ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
4. ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
5. ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
6. ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
7. ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
8. ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
9. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.
10. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.

Chapter 25

1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
2. ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
3. ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
4. ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
5. ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
6. ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
7. ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
8. ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
9. ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
10. ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
11. ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
12. ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
13. ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.
14. ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.
15. ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.
16. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
17. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.
18. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
19. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
20. ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್‌ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
21. ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
22. ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ
23. ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
24. ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
25. ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
26. ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
27. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
28. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.
29. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
30. ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
31. ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ.
32. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು.
33. ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
34. ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
35. ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು.
36. ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
37. ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.
38. ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

Chapter 26

1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
2. ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
3. ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
4. ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
5. ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ
6. ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
7. ಹೀಗೆ ಯೆರೆವಿಾಯನು ಈ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಹೇಳುತ್ತಿರಲಾಗಿ ಯಾಜಕರೂ ಪ್ರವಾದಿಗಳೂ ಜನ ರೆಲ್ಲರೂ ಕೇಳುತ್ತಿದ್ದರು.
8. ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
9. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
10. ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
11. ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
12. ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
13. ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
14. ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
15. ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
16. ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
17. ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
18. ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
19. ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
20. ಇದಲ್ಲದೆ ಕಿರ್ಯತ್‌ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
21. ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
22. ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
23. ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
24. ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.

Chapter 27

1. ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
2. ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
3. ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.
4. ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು--
5. ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
6. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
7. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
8. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
9. ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
10. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
11. ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
12. ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
13. ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
14. ಆದದರಿಂದ ಬಾಬೆಲಿನ ಅರಸನಿಗೆ ನೀವು ಸೇವೆಮಾಡಬೇಡಿರೆಂದು ನಿಮಗೆ ಹೇಳುವ ಪ್ರವಾದಿಗಳ ವಾಕ್ಯಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
15. ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
16. ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
17. ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?
18. ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
19. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
20. ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
21. ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --
22. ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.

Chapter 28

1. ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
2. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
3. ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
4. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
5. ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
6. ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್‌: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
7. ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
8. ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು.
9. ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
10. ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರವಿಾಯನ ಕುತ್ತಿಗೆ ಯಿಂದ ನೊಗವನ್ನು ತೆಗೆದು ಅದನ್ನು ಮುರಿದುಬಿಟ್ಟನು.
11. ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
12. ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
13. ಹೋಗಿ ಹನನ್ಯನಿಗೆ ಹೀಗೆ ಹೇಳು--ನೀನು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಉಂಟುಮಾಡುವಿ ಎಂದು ಕರ್ತನು ಹೇಳುತ್ತಾನೆ.
14. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
15. ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
16. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.
17. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.

Chapter 29

1. ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
2. ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
3. ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
4. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--
5. ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
6. ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
7. ನಾನು ನಿಮ್ಮನ್ನು ಸೆರೆಯಾಗಿ ಒಯ್ಯಲ್ಪಟ್ಟ ಪಟ್ಟಣದ ಸಮಾಧಾನವನ್ನು ಹುಡುಕಿರಿ; ಅದಕ್ಕೋಸ್ಕರ ಕರ್ತನಿಗೆ ಪ್ರಾರ್ಥನೆ ಮಾಡಿರಿ; ಅದರ ಸಮಾಧಾನದಿಂದ ನಿಮಗೆ ಸಮಾ ಧಾನವಾಗುವದು.
8. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
9. ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ.
10. ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
11. ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
12. ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
13. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
14. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
15. ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
16. ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
17. ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
18. ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
19. ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ ಎಂದು ಕರ್ತನು ಅನ್ನುತ್ತಾನೆ; ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಗಿನಲ್ಲಿಯೇ ಕಳುಹಿಸಿದೆನು; ಆದರೆ ನೀವು ಕೇಳಲಿಲ್ಲವೆಂದು ಕರ್ತನು ಅನ್ನುತ್ತಾನೆ.
20. ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ,
21. ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
22. ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
23. ಅವರು ತಮ್ಮ ನೆರೆಯವರ ಹೆಂಡತಿಯರ ಸಂಗಡ ವ್ಯಭಿಚಾರ ಮಾಡಿ ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ ಇಸ್ರಾಯೇಲಿನಲ್ಲಿ ನೀಚತನವನ್ನು ನಡಿಸಿದರು; ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
24. ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು--
25. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
26. ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
27. ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನ ವನಾದ ಯೆರೆವಿಾಯನನ್ನು ನೀನು ಯಾಕೆ ಗದರಿಸ ಲಿಲ್ಲ?
28. ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
29. ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
30. ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--
31. ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣ
32. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.

Chapter 30

1. ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ, ಇಸ್ರಾಯೇಲಿನ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--
2. ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆ.
3. ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್‌ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
4. ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ--
5. ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ.
6. ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?
7. ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
8. ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
9. ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
10. ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
11. ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
12. ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
13. ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
14. ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
15. ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
16. ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
17. ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
18. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
19. ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
20. ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
21. ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
22. ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
23. ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.
24. ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.

Chapter 31

1. ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.
2. ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.
3. ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
4. ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
5. ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
6. ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
7. ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
8. ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.
9. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
10. ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
11. ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
12. ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
13. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
14. ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
15. ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
16. ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
17. ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
18. ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
19. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
20. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
21. ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
22. ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
23. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
24. ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.
25. ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.
26. ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
27. ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
28. ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
29. ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.
30. ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.
31. ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
32. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
33. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
34. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
35. ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
36. ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
37. ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
38. ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
39. ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್‌ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.
40. ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.

Chapter 32

1. ನೆಬೂಕದ್ನೆಚ್ಚರನ ಹದಿನೆಂಟನೇ ವರುಷವಾಗಿದ್ದ, ಚಿದ್ಕೀಯನ ಹತ್ತನೇ ವರುಷದಲ್ಲಿ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
2. ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
3. ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
4. ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
5. ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
6. ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
7. ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
8. ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
9. ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
10. ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
11. ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
12. ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
13. ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
14. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
15. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
16. ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--
17. ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
18. ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
19. ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
20. ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
21. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
22. ಅವರ ತಂದೆಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀ.
23. ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
24. ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
25. ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
26. ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
27. ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
28. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
29. ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
30. ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.
31. ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
32. ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
33. ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
34. ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
35. ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
36. ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
37. ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
38. ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
39. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
40. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
41. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
42. ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.
43. ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.
44. ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.

Chapter 33

1. ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
2. ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
3. ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
4. ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
5. ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
6. ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
7. ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.
8. ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
9. ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
10. ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
11. ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
12. ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
13. ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳ ಲ್ಲಿಯೂ ದಕ್ಷಿಣದ ಪಟ್ಟಣಗಳಲ್ಲಿಯೂ ಬೆನ್ಯಾವಿಾನನ ದೇಶದಲ್ಲಿಯೂ ಯೆರೂಸಲೇಮಿನ ಪ್ರದೇಶಗಳ ಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಗಳು ಎಣಿಸುವವನ ಕೈಕೆಳಗೆ ಹಾದು ಹೋಗುವವೆಂದು ಕರ್ತನು ಹೇಳುತ್ತಾನೆ.
14. ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
15. ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
16. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
17. ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
18. ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
19. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
20. ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
21. ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
22. ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
23. ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
24. ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
25. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--
26. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.

Chapter 34

1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
2. ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
3. ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
4. ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
5. ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
6. ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
7. ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
8. ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
9. ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
10. ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
11. ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
12. ಆದದರಿಂದ ಕರ್ತನ ವಾಕ್ಯವು ಯೆರೆವಿಾಯನಿಗೆ ಕರ್ತನಿಂದ ಉಂಟಾಗಿ ಹೇಳಿದ್ದೇನಂದರೆ--
13. ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ
14. ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
15. ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
16. ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
17. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
18. ನನ್ನ ಒಡಂಬ ಡಿಕೆಯನ್ನು ವಿಾರಿದ ಮನುಷ್ಯರನ್ನೂ ಕರುವನ್ನೂ ಎರಡು ಭಾಗಮಾಡಿ ಅದರ ತುಂಡುಗಳ ನಡುವೆ ದಾಟಿಹೋಗಿ ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನೂ
19. ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ
20. ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
21. ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.
22. ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.

Chapter 35

1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
2. ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
3. ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
4. ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
5. ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
6. ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;
7. ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
8. ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
9. ವಾಸಮಾಡು ವದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ನಾವು ಕೇಳಿ ದ್ದೇವೆ; ನಮಗೆ ದ್ರಾಕ್ಷೇ ತೋಟಗಳೂ ಹೊಲಗಳೂ ಬೀಜವೂ ಇಲ್ಲ.
10. ಗುಡಾರಗಳಲ್ಲಿ ವಾಸಮಾಡುತ್ತೇವೆ; ನಮ್ಮ ತಂದೆಯಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಕೇಳಿ ಮಾಡಿದ್ದೇವೆ.
11. ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
12. ಆಗ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--
13. ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
14. ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ.
15. ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
16. ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
17. ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
18. ರೇಕಾಬ್ಯರ ಮನೆಯವರಿಗೆ ಯೆರೆವಿಾಯನು ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನೀವು ನಿಮ್ಮ ಪಿತೃಗಳಾದ ಯೋನಾದಾಬನ ಆಜ್ಞೆ ಯನ್ನು ಕೇಳಿ ಅವನ ಆಜ್ಞೆಗಳನೆಲ್ಲಾ ಕೈಕೊಂಡು ಅವನು ನಿಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದರಿಂದ,
19. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.

Chapter 36

1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--
2. ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
3. ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
4. ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
5. ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು.
6. ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
7. ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
8. ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
9. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾ ಕೀಮನ ಐದನೇ ವರುಷದ ಒಂಭತ್ತನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಕರ್ತನ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದರು.
10. ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
11. ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,
12. ಲೇಖಕನ ಕೊಠಡಿಗೆ ಇಳಿದು ಹೋದನು; ಅಗೋ, ಅಲ್ಲಿ ಪ್ರಧಾನರೆಲ್ಲರು ಕೂತುಕೊಂಡಿದ್ದರು; ಯಾರಂದರೆ--ಲೇಖಕನಾದ ಎಲೀಷಾಮನೂ ಶೆಮಾಯನ ಮಗನಾದ ದೆಲಾ ಯನೂ ಅಕ್ಬೋರನ ಮಗನಾದ ಎಲ್ನಾಥಾನೂ ಶಾಫಾ ನನ ಮಗನಾದ ಗೆಮರ್ಯನೂ ಹನನೀಯನ ಮಗ ನಾದ ಚಿದ್ಕೀಯನೂ ಇವರೇ.
13. ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು.
14. ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
15. ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
16. ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
17. ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
18. ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು.
19. ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
20. ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
21. ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.
22. ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.
23. ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
24. ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
25. ಹೀಗಾದರೂ ಎಲ್ನಾಥಾ ನನೂ ದೆಲಾಯನೂ ಗೆಮರ್ಯನೂ ಆ ಸುರಳಿಯು ಸುಡಲ್ಪಡದ ಹಾಗೆ ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.
26. ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
27. ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
28. ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.
29. ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.
30. ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
31. ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.
32. ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.

Chapter 37

1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
2. ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ.
3. ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
4. ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
5. ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು.
6. ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
7. ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
8. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು.
9. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.
10. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
11. ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ
12. ಯೆರೆವಿಾಯನು ಬೆನ್ಯಾವಿಾನನ ದೇಶಕ್ಕೆ ಹೋಗು ವದಕ್ಕೂ ಜನರ ಮಧ್ಯದಿಂದ ತನ್ನ ಪಾಲನ್ನು ತಕ್ಕೊಳ್ಳು ವದಕ್ಕೂ ಯೆರೂಸಲೇಮಿನಿಂದ ಹೊರಟನು.
13. ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
14. ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
15. ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
16. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
17. ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
18. ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
19. ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
20. ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನು
21. ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.

Chapter 38

1. ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
2. ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
3. ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್‌ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
4. ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
5. ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
6. ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
7. ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
8. ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
9. ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
10. ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
11. ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.
12. ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.
13. ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
14. ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
15. ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
16. ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
17. ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
18. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
19. ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
20. ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
21. ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
22. ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ.
23. ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
24. ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.
25. ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--
26. ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.
27. ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.
28. ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.

Chapter 39

1. ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
2. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
3. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್‌ಸ ರೇಚರನೂ ಸಮ್ಗರ್‌ನೆಬೋವನೂ ಸರ್ಸೆಕೀಮನೂ ನೇರ್ಗೆಲ್‌ಸರೆಚರನೂ ರಬ್‌ಶರೀಸ್‌ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
4. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
5. ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್‌ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
6. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
7. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
8. ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
9. ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
10. ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
11. ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--
12. ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
13. ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
14. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
15. ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ--
16. ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
17. ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.
18. ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.

Chapter 40

1. ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
2. ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
3. ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
4. ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
5. ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
6. ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
7. ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
8. ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
9. ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
10. ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
11. ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್‌ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
12. ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
13. ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
14. ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
15. ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.
16. ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.

Chapter 41

1. ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
2. ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
3. ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
4. ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
5. ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
6. ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
7. ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
8. ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
9. ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
10. ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
11. ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
12. ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
13. ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
14. ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
15. ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.
16. ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
17. ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.
18. ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.

Chapter 42

1. ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
2. ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
3. ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.
4. ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
5. ಆಗ ಅವರು ಯೆರೆ ವಿಾಯನಿಗೆ ಹೇಳಿದ್ದೇನಂದರೆ--ನಿನ್ನ ದೇವರಾದ ಕರ್ತನು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾನೋ ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ ಕರ್ತನು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಕರ್ತನ ಸ್ವರವನ್ನು ಕೇಳುವಾಗ ನಮಗೆ ಒಳ್ಳೇದಾ ಗುವ ಹಾಗೆ
6. ನಾವು ಯಾವಾತನ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ ಆ ನಮ್ಮ ದೇವರಾದ ಕರ್ತನ ಸ್ವರವನ್ನು ಅದು ಒಳ್ಳೇದ್ದಾದರೂ ಸರಿಯೇ ಕೆಟ್ಟದ್ದಾದರೂ ಸರಿಯೇ ಕೇಳುವೆವು ಅಂದರು.
7. ಹತ್ತು ದಿವಸಗಳಾದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಬಂತು.
8. ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
9. ಕರೆದು ಅವರಿಗೆ ಹೇಳಿದ್ದೇನಂದರೆ--ಯಾವಾತನ ಮುಂದೆ ನಿಮ್ಮ ವಿಜ್ಞಾ ಪನೆಯನ್ನು ತರುವದಕ್ಕೆ ನನ್ನನ್ನು ಕಳುಹಿಸಿದ್ದಿರೋ ಆ ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--
10. ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
11. ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.
12. ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು.
13. ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ
14. ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ
15. ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,
16. ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
17. ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
18. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
19. ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;
20. ನಮಗೋಸ್ಕರ ನಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡೆಂದೂ ನಮ್ಮ ದೇವರಾದ ಕರ್ತನು ಏನೇನು ಹೇಳುವನೋ ಅದನ್ನು ನಮಗೆ ತಿಳಿಸು, ಆಗ ನಾವು ಮಾಡುವೆವೆಂದೂ ಹೇಳಿ, ನನ್ನನ್ನು ನಿಮ್ಮ ದೇವರಾದ ಕರ್ತನ ಬಳಿಗೆ ಕಳುಹಿಸಿದಿರಿ.
21. ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ; ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನಾದರೂ ಆತನು ಯಾವದರ ವಿಷಯ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೋ ಅದರಲ್ಲಿ ಯಾವದನ್ನಾದರೂ ಕೇಳ ಲಿಲ್ಲವಾದರೆ
22. ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.

Chapter 43

1. ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
2. ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
3. ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
4. ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
5. ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
6. ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
7. ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
8. ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
9. ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
10. ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
11. ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
12. ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.
13. ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.

Chapter 44

1. ಐಗುಪ್ತದ ಮಿಗ್ದೋಲ್‌ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್‌ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
2. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.
3. ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
4. ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
5. ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.
6. ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
7. ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?
8. ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
9. ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
10. ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
11. ಆದದ ರಿಂದ ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದವನ್ನೆಲ್ಲಾ ಕಡಿದು ಬಿಡುವದಕ್ಕೆ ನನ್ನ ದೃಷ್ಟಿ ಯನ್ನು ಕೇಡಿಗಾಗಿ ನಿಮಗೆ ವಿರೋಧವಾಗಿ ಇಡುತ್ತೇನೆ.
12. ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
13. ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
14. ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
15. ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್‌ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
16. ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
17. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
18. ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
19. ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?
20. ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
21. ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
22. ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
23. ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
24. ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
25. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವೂ ನಿಮ್ಮ ಹೆಂಡತಿ ಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ ಅವಳಿಗೆ ಪಾನದರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವೆವೆಂದೂ ನಿಮ್ಮ ಬಾಯಿಗಳಿಂದ ಹೇಳಿ ಕೈಗಳಿಂದ ಈಡೇರಿಸಿದ್ದೀರಿ; ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ಸ್ಥಾಪಿಸುವಿರಿ, ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡಿಸುವಿರಿ.
26. ಆದದರಿಂದ ಐಗುಪ್ತ ದೇಶದಲ್ಲಿ ವಾಸವಾಗಿರುವ ಯೆಹೂದದವರೆಲ್ಲರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೇಳು ತ್ತಾನೆ--ಇಗೋ, ಕರ್ತನಾದ ದೇವರ ಜೀವದಾಣೆ ಎಂದು ನನ್ನ ಹೆಸರು ಇನ್ನು ಮೇಲೆ ಸಮಸ್ತ ಐಗುಪ್ತ ದೇಶದಲ್ಲಿ ಯೆಹೂದದ ಮನುಷ್ಯರಲ್ಲಿ ಒಬ್ಬನ ಬಾಯಿಂದಲಾದರೂ ಹೇಳಲ್ಪಡುವದಿಲ್ಲವೆಂದು ನನ್ನ ಮಹತ್ತಾದ ಹೆಸರಿನಲ್ಲಿ ಆಣೆ ಇಟ್ಟುಕೊಂಡಿದ್ದೇನೆ.
27. ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
28. ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
29. ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.
30. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.

Chapter 45

1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
2. ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
3. ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
4. ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.
5. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.

Chapter 46

1. ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್‌ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ
2. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
3. ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;
4. ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
5. ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
6. ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್‌ ನದಿಯ ತೀರದಲ್ಲಿ ಅವರು ಎಡವಿ ಬೀಳುವರು.
7. ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
8. ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ.
9. ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
10. ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್‌ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
11. ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
12. ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.
13. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.
14. ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್‌ನಲ್ಲಿಯೂ ತಹಪನೇಸ್‌ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
15. ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.
16. ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
17. ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.
18. ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
19. ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್‌ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
20. ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ.
21. ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
22. ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.
23. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
24. ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು.
25. ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
26. ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
27. ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.
28. ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.

Chapter 47

1. ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
2. ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
3. ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
4. ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
5. ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
6. ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.
7. ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.

Chapter 48

1. ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್‌ ನಾಚಿಕೆಹೊಂದಿ ಹೆದರಿಕೊಂಡಿತು.
2. ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
3. ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
4. ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
5. ಲೂಹೀತ್‌ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
6. ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
7. ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
8. ಒಂದೊಂದು ಪಟ್ಟಣದ ಮೇಲೆ ಸೂರೆಗೊಳ್ಳುವವನು ಬರುವನು; ಕರ್ತನು ಹೇಳಿದ ಹಾಗೆಯೇ ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳ ಲಾರದು, ತಗ್ಗೂ ನಾಶವಾಗುವದು; ಬೈಲು ಹಾಳಾಗುವದು.
9. ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಅದರ ಪಟ್ಟಣಗಳು ಹಾಳಾಗು ವವು; ಅವುಗಳಲ್ಲಿ ನಿವಾಸಿಗಳಿರುವದಿಲ್ಲ.
10. ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
11. ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.
12. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
13. ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು.
14. ನಾವು ಪರಾಕ್ರಮ ಶಾಲಿಗಳೂ ಯುದ್ಧಕ್ಕೆ ಬಲಿಷ್ಠರೂ ಎಂದು ನೀವು ಹೇಳುವದು ಹೇಗೆ?
15. ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
16. ಮೋವಾಬಿನ ಆಪತ್ತು ಬರುವದಕ್ಕೆ ಸವಿಾಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.
17. ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
18. ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
19. ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
20. ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
21. ಇದಲ್ಲದೆ ಬೈಲು ಸೀಮೆಯ ಮೇಲೆ ನ್ಯಾಯತೀರ್ವಿಕೆ ಬಂತು; ಹೋಲೋನಿನ ಮೇಲೆಯೂ ಯಾಚದ ಮೇಲೆಯೂ ಮೆಫಾತ್‌ನ ಮೇಲೆಯೂ
22. ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್‌ದಿಬ್ಲಾತಯಿಮ್‌ನ ಮೇಲೆಯೂ
23. ಕಿರ್ಯಾತಯಾಮಿನ ಮೇಲೆಯೂ ಬೇತ್‌ಗಾಮುಲಿನ ಮೇಲೆಯೂ ಬೇತ್‌ಮೆಯೋನಿನ ಮೇಲೆಯೂ
24. ಕೆರೀಯೋತ್‌ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.
25. ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.
26. ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.
27. ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
28. ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
29. ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
30. ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.
31. ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್‌ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
32. ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
33. ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
34. ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್‌ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್‌ನ ನೀರುಗಳು ಸಹ ಹಾಳಾದವು.
35. ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
36. ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್‌ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
37. ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
38. ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
39. ಅದು ಹೇಗೆ ಮುರಿದು ಹೋಯಿತು! ಮೋವಾಬು ಹೇಗೆ ನಾಚಿಕೆಪಟ್ಟು ಬೆನ್ನು ತಿರುಗಿಸಿತು ಎಂದು ಗೋಳಿಡುವರು. ಹೀಗೆ ಮೋವಾಬು ಅದರ ಸುತ್ತಲಿರು ವವರೆಲ್ಲರಿಗೆ ಹಾಸ್ಯಕ್ಕೂ ಹೆದರಿಕೆಗೂ ಆಗುವದು.
40. ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವನು ಹದ್ದಿನ ಹಾಗೆ ಹಾರಿ ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವೆನು.
41. ಕೆರೀಯೋತ್‌ ವಶ ವಾಯಿತು; ಬಲವಾದ ಕೋಟೆಗಳು ಹಿಡಿಯಲ್ಪಟ್ಟವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೃದಯಗಳು ಹೆರುವ ಸ್ತ್ರೀಯ ಹೃದಯದಂತೆ ಇರುವವು.
42. ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
43. ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
44. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
45. ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
46. ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.
47. ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.

Chapter 49

1. ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
2. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
3. ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
4. ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ?
5. ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ.
6. ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
7. ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
8. ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
9. ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
10. ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
11. ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
12. ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
13. ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
14. ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ.
15. ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು.
16. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
17. ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
18. ಸೊದೋಮ್‌ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
19. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
20. ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
21. ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
22. ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
23. ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
24. ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
25. ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?
26. ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
27. ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು.
28. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
29. ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
30. ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.
31. ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ.
32. ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
33. ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
34. ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
35. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
36. ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
37. ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು.
38. ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.
39. ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.

Chapter 50

1. ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.
2. ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
3. ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
4. ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
5. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
6. ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
7. ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
8. ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
9. ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
10. ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.
11. ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
12. ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
13. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
14. ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
15. ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
16. ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
17. ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
18. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
19. ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್‌ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
20. ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
21. ಮೆರಾಥಯಿಮ್‌ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
22. ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
23. ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್‌ ಹೇಗೆ ಜನಾಂಗಗಳೊಳಗೆ ಹಾಳಾಯಿತು!
24. ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
25. ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
26. ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
27. ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
28. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
29. ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
30. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
31. ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
32. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
33. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
34. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
35. ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
36. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.
37. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
38. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
39. ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
40. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
41. ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
42. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
43. ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
44. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
45. ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.
46. ಬಾಬೆಲ್‌ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.

Chapter 51

1. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.
2. ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
3. ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
4. ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
5. ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
6. ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
7. ಬಾಬೆಲ್‌ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
8. ಇದ್ದಕ್ಕಿದ್ದ ಹಾಗೆ ಬಾಬೆಲ್‌ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
9. ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
10. ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
11. ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
12. ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
13. ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
14. ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
15. ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
16. ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
17. ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
18. ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
19. ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
20. ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;
21. ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.
22. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ.
23. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
24. ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
25. ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
26. ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
27. ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್‌, ಮಿನ್ನಿ, ಅಷ್ಕೆನಜ್‌ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
28. ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
29. ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
30. ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
31. ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
32. ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
33. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
34. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
35. ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
36. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
37. ಬಾಬೆಲ್‌ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
38. ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
39. ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
40. ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
41. ಶೇಷಕ್‌ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್‌ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
42. ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
43. ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
44. ನಾನು ಬಾಬೆಲಿನಲ್ಲಿರುವ ಬೇಲ್‌ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
45. ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
46. ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.
47. ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
48. ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
49. ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
50. ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
51. ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
52. ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
53. ಬಾಬೆಲ್‌ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
54. ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು.
55. ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
56. ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
57. ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
58. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
59. ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
60. ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.
61. ಯೆರೆವಿಾಯನು ಸೆರಾಯನಿಗೆ ಹೇಳಿದ್ದೇನಂದರೆ-- ನೀನು ಬಾಬೆಲಿಗೆ ಬಂದು
62. ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
63. ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್‌ ಮುಳುಗಿಹೋಗುವದು;
64. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.

Chapter 52

1. ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್‌.
2. ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
3. ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
4. ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
5. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
6. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
7. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
8. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
9. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್‌ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
10. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
11. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
12. ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
13. ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
14. ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
15. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
16. ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
17. ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
18. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
19. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
20. ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
21. ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
22. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
23. ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
24. ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
25. ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
26. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
27. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್‌ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
28. ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
29. ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
30. ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
31. ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
32. ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು.
33. ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.
34. ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.


Free counters!   Site Meter(April28th2012)