Home Churches About
 

Chapter 1

1. ನಮ್ಮಲ್ಲಿ ಬಹು ನಿಶ್ಚಯವಾಗಿ ನಂಬಿ ಕೊಂಡಿರುವ ವಿಷಯಗಳ ಪ್ರಕಟನೆಯನ್ನು ಕ್ರಮವಾಗಿ ಬರೆಯುವದಕ್ಕೆ ಅನೇಕರು ಕೈಕೊಂಡು
2. ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ
3. ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
4. ಹೀಗೆ ನಿನಗೆ ಬೋಧಿಸಲ್ಪಟ್ಟವುಗಳು ಸ್ಥಿರವಾದವುಗಳೆಂದು ಇದರಿಂದ ನೀನು ತಿಳಿಯಬಹುದು.
5. ಯೂದಾಯದ ಅರಸನಾದ ಹೆರೋದನ ದಿನ ಗಳಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರಿಯನೆಂದು ಹೆಸರಿದ್ದ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ಕುಮಾರ್ತೆಯರಿಗೆ ಸಂಬಂಧಪಟ್ಟವಳು. ಆಕೆಯ ಹೆಸರು ಎಲಿಸಬೇತ್‌.
6. ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
7. ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
8. ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
9. ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
10. ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
11. ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
12. ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
13. ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
14. ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
15. ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
16. ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
17. ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
18. ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
19. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
20. ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
21. ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
22. ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
23. ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
24. ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
25. ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
26. ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
27. ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
28. ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
29. ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
30. ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
31. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
32. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
33. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
34. ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
35. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
36. ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
37. ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
38. ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
39. ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
40. ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
41. ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ
42. ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
43. ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
44. ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
45. ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
46. ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
47. ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
48. ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
49. ಪರಾಕ್ರಮಿಯಾದಾತನು ನನಗೆ ಮಹತ್ತಾದವುಗಳನ್ನು ಮಾಡಿದ್ದಾನೆ; ಆತನ ಹೆಸರು ಪರಿಶುದ್ಧವಾದದ್ದು.
50. ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
51. ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
52. ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
53. ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
54. ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
55. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.
56. ಮರಿ ಯಳು ಸುಮಾರು ಮೂರು ತಿಂಗಳು ಅವಳ ಜೊತೆ ಯಲ್ಲಿದ್ದು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದಳು.
57. ಇದಲ್ಲದೆ ಎಲಿಸಬೇತಳಿಗೆ ಹೆರಿಗೆಯ ಸಮಯವು ಪೂರ್ಣವಾದಾಗ ಆಕೆಯು ಒಬ್ಬ ಮಗನನ್ನು ಹೆತ್ತಳು.
58. ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
59. ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
60. ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
61. ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
62. ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
63. ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
64. ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
65. ಆಗ ಅವರ ಸುತ್ತಲೂ ಮತ್ತು ಎಲ್ಲಾ ಯೂದಾಯದ ಬೆಟ್ಟದ ಸೀಮೆಯಲ್ಲಿಯೂ ಈ ಸಂಗತಿಗಳೆಲ್ಲಾ ಹರಡಿದವು.
66. ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
67. ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
68. ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
69. ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
70. ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
71. ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ಹಗೆ ಮಾಡುವವರ ಕೈಯಿಂದಲೂ ರಕ್ಷಿಸಲ್ಪಡುವಂತೆ
72. ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
73. ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
74. ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
75. ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
76. ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
77. ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
78. ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
79. ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.
80. ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.

Chapter 2

1. ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
2. ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.
3. ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು.
4. (ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್‌ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
5. ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು.
6. ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.
7. ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
8. ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
9. ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
10. ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
11. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
12. ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
13. ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
14. ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
15. ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
16. ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
17. ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
18. ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
19. ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
20. ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
21. ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
22. ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
23. (ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
24. ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
25. ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
26. ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
27. ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
28. ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ--
29. ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
30. ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
31. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
32. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
33. ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
34. ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
35. ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
36. ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
37. ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
38. ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
39. ಅವರು ಕರ್ತನ ನ್ಯಾಯ ಪ್ರಮಾಣದ ಪ್ರಕಾರ ಎಲ್ಲವುಗಳನ್ನು ಮಾಡಿ ಮುಗಿ ಸಿದ ಮೇಲೆ ತಮ್ಮ ಸ್ವಂತ ಪಟ್ಟಣವಾದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
40. ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
41. ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
42. ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
43. ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
44. ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
45. ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
46. ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
47. ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
48. ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
49. ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
50. ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
51. ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.
52. ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.

Chapter 3

1. ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
2. ಅನ್ನನು ಮತ್ತು ಕಾಯಫನು ಮಹಾ ಯಾಜಕರೂ ಆಗಿದ್ದಾಗ ಅಡವಿಯಲ್ಲಿದ್ದ ಜಕರೀಯನ ಮಗನಾದ ಯೋಹಾನನ ಬಳಿಗೆ ದೇವರ ವಾಕ್ಯವು ಬಂತು.
3. ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು.
4. ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
5. ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
6. ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
7. ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
8. ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
9. ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
10. ಆಗ ಜನರು ಅವನಿಗೆ--ಹಾಗಾದರೆ ನಾವೇನು ಮಾಡಬೇಕು ಎಂದು ಕೇಳಿದರು.
11. ಅವನು ಪ್ರತ್ಯುತ್ತರವಾಗಿ ಅವರಿಗೆ--ಎರಡು ಅಂಗಿಗಳುಳ್ಳವನು ಏನೂ ಇಲ್ಲದವ ನಿಗೆ ಕೊಡಲಿ; ಆಹಾರವುಳ್ಳವನು ಹಾಗೆಯೇ ಮಾಡಲಿ ಎಂದು ಹೇಳಿದನು.
12. ತರುವಾಯ ಸುಂಕದವರು ಸಹ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಬಂದು ಅವನಿಗೆ--ಬೋಧಕನೇ, ನಾವೇನು ಮಾಡಬೇಕು ಎಂದು ಕೇಳಿದರು.
13. ಅದಕ್ಕವನು ಅವರಿಗೆ-- ನಿಮಗೆ ನೇಮಿಸಲ್ಪಟ್ಟದ್ದಕ್ಕಿಂತ ಹೆಚ್ಚೇನೂ ತೆಗೆದು ಕೊಳ್ಳಬೇಡಿರಿ ಅಂದನು.
14. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
15. ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
16. ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು
17. ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
18. ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
19. ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
20. ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
21. ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
22. ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
23. ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
24. ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;
25. ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;
26. ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು;
27. ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
28. ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು;
29. ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
30. ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;
31. ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
32. ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
33. ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
34. ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
35. ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
36. ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
37. ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;
38. ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.

Chapter 4

1. ಯೇಸು ಪರಿಶುದ್ಧಾತ್ಮನಿಂದ ತುಂಬಿದವನಾಗಿ ಯೊರ್ದನಿನಿಂದ ಹಿಂತಿರುಗಿ ಬಂದು ಆತ್ಮ ನಿಂದ ಅಡವಿಯೊಳಕ್ಕೆ ನಡಿಸಲ್ಪಟ್ಟು
2. ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
3. ಆಗ ಸೈತಾನನು ಆತ ನಿಗೆ--ನೀನು ದೇವಕುಮಾರನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
4. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
5. ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
6. ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
7. ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.
8. ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
9. ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
10. ಆತನು ನಿನ್ನನ್ನು ಕಾಯುವದಕ್ಕೆ ತನ್ನ ದೂತರಿಗೆ ಅಪ್ಪಣೆ ಕೊಡುವನು;
11. ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
12. ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
13. ಸೈತಾನನು ಎಲ್ಲಾ ಶೋಧನೆಯನ್ನು ಮುಗಿಸಿದ ಮೇಲೆ ಸ್ವಲ್ಪ ಕಾಲ ಆತನ ಬಳಿಯಿಂದ ಹೊರಟು ಹೋದನು.
14. ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
15. ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
16. ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್‌ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
17. ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು--
18. ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
19. ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
20. ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
21. ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
22. ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
23. ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
24. ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.
25. ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
26. ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
27. ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
28. ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು.
29. ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
30. ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
31. ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್‌ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
32. ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
33. ಆ ಸಭಾಮಂದಿರ ದಲ್ಲಿ ಅಶುದ್ಧ ದೆವ್ವ ಆತ್ಮವಿದ್ದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕೂಗುತ್ತಾ--
34. ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
35. ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
36. ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
37. ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
38. ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
39. ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
40. ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
41. ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
42. ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು.
43. ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
44. ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.

Chapter 5

1. ಇದಾದ ಮೇಲೆ ಆತನು ಗೆನೇಜರೆತ್‌ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
2. ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
3. ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
4. ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
5. ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
6. ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
7. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
8. ಸೀಮೋನ್‌ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
9. ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
10. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
11. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
12. ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
13. ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
14. ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
15. ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
16. ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
17. ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
18. ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
19. ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
20. ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
21. ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
22. ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
23. ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
24. ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
25. ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
26. ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
27. ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
28. ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.
29. ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
30. ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
31. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
32. ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
33. ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
34. ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
35. ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
36. ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
37. ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
38. ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.
39. ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.

Chapter 6

1. ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
2. ಆದರೆ ಫರಿಸಾಯ ರಲ್ಲಿ ಕೆಲವರು ಅವರಿಗೆ--ಸಬ್ಬತ್‌ ದಿನಗಳಲ್ಲಿ ಮಾಡ ಬಾರದ್ದನ್ನು ನೀವು ಯಾಕೆ ಮಾಡುತ್ತೀರಿ ಅಂದರು.
3. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
4. ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
5. ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
6. ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
7. ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್‌ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
8. ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
9. ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್‌ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
10. ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
11. ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
12. ಇದಾದ ಮೇಲೆ ಆತನು ಆ ದಿವಸಗಳಲ್ಲಿ ಪ್ರಾರ್ಥಿಸುವದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ ರಾತ್ರಿ ಯೆಲ್ಲಾ ದೇವರಿಗೆ ಪ್ರಾರ್ಥಿಸಿದನು.
13. ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
14. ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
15. ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
16. ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
17. ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್‌ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
18. ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
19. ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
20. ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
21. ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
22. ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
23. ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
24. ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
25. ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
26. ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
27. ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
28. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
29. ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
30. ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
31. ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
32. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
33. ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ.
34. ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
35. ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
36. ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
37. ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
38. ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
39. ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
40. ತನ್ನ ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನು.
41. ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
42. ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
43. ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
44. ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
45. ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
46. ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
47. ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
48. ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.
49. ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.

Chapter 7

1. ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು.
2. ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.
3. ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು.
4. ಅವರು ಯೇಸುವಿನ ಬಳಿಗೆ ಬಂದು ಆತನಿಗೆ ಒತ್ತಾಯ ಮಾಡಿ--ನೀನು (ಅವನ ಆಳನ್ನು) ಸ್ವಸ್ಥಮಾಡಬೇಕು; ಯಾಕಂದರೆ ಅವನು ಯೋಗ್ಯನಾಗಿದ್ದಾನೆ.
5. ಅವನು ನಮ್ಮ ಜನಾಂಗವನ್ನು ಪ್ರೀತಿಸುವದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ ಎಂದು ಬೇಡಿಕೊಂಡರು.
6. ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
7. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
8. ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
9. ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
10. ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
11. ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು.
12. ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
13. ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
14. ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
15. ಆಗ ಸತ್ತವನು ಕೂತುಕೊಂಡು ಮಾತನಾಡಲಾರಂಭಿಸಿದನು. ಆತನು ಅವನನ್ನು ಅವನ ತಾಯಿಗೆ ಒಪ್ಪಿಸಿದನು.
16. ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
17. ಆತನ ವಿಷಯವಾದ ಈ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
18. ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು.
19. ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
20. ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
21. ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
22. ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
23. ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.
24. ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
25. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
26. ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
27. ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
28. ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
29. ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
30. ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
31. ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ?
32. ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
33. ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
34. ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
35. ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.
36. ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
37. ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
38. ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತು ಅಳುತ್ತಾ ಆತನ ಪಾದ ಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ ಅವುಗಳನ್ನು ತನ್ನ ತಲೇಕೂದಲಿನಿಂದ ಒರಸಿ ಆತನ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
39. ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
40. ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
41. ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
42. ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
43. ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
44. ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
45. ನೀನು ನನಗೆ ಮುದ್ದು ಕೊಡಲಿಲ್ಲ; ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವದನ್ನು ಬಿಡಲಿಲ್ಲ.
46. ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ತೈಲವನ್ನು ಹಚ್ಚಿದ್ದಾಳೆ.
47. ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
48. ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
49. ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.
50. ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.

Chapter 8

1. ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
2. ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
3. ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
4. ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ--
5. ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
6. ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು.
7. ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
8. ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
9. ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು.
10. ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
11. ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
12. ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
13. ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
14. ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
15. ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
16. ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
17. ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
18. ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
19. ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
20. ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
21. ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
22. ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
23. ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
24. ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
25. ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
26. ಅವರು ಗಲಿಲಾಯಕ್ಕೆ ಎದುರಾಗಿದ್ದ ಗದರೇನರ ಸೀಮೆಗೆ ತಲುಪಿದರು.
27. ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
28. ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
29. (ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
30. ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್‌ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.
31. ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು.
32. ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
33. ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
34. ಅವುಗಳನ್ನು ಮೇಯಿಸು ತ್ತಿದ್ದವರು ಸಂಭವಿಸಿದ್ದನ್ನು ನೋಡಿ ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯ ಪಡಿಸಿದರು.
35. ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
36. ಅದನ್ನು ನೋಡಿದವರು ಸಹ ಯಾವ ರೀತಿಯಲ್ಲಿ ದೆವ್ವಗಳಿಂದ ಹಿಡಿದಿದ್ದವನು ಸ್ವಸ್ಥಮಾಡಲ್ಪಟ್ಟನೆಂದು ಅವರಿಗೆ ತಿಳಿಯ ಪಡಿಸಿದರು.
37. ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
38. ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
39. ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
40. ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
41. ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
42. ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
43. ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
44. ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
45. ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
46. ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
47. ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.
48. ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
49. ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
50. ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
51. ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
52. ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
53. ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
54. ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
55. ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.
56. ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

Chapter 9

1. ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
2. ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
3. ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
4. ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
5. ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
6. ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
7. ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
8. ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
9. ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
10. ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
11. ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
12. ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
13. ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
14. ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
15. ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
16. ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
17. ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
18. ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
19. ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
20. ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
21. ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
22. ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
23. ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
24. ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
25. ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
26. ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
27. ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
28. ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
29. ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
30. ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
31. ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32. ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
33. ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
34. ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
35. ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
36. ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
37. ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
38. ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
39. ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
40. ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
41. ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
42. ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
43. ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
44. ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
45. ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
46. ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
47. ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
48. ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
49. ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
50. ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
51. ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
52. ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
53. ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
54. ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
55. ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
56. ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.
57. ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
58. ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
59. ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
60. ಆದರೆ ಯೇಸು ಅವ ನಿಗೆ--ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ; ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು ಅಂದನು.
61. ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.
62. ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.

Chapter 10

1. ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
2. ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
3. ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
4. ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
5. ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
6. ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
7. ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
8. ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ.
9. ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
10. ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ--
11. ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
12. ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
13. ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
14. ಆದರೆ ನ್ಯಾಯ ತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ತೂರ್‌ ಸೀದೋನ್‌ಗಳ ಗತಿಯು ಹೆಚ್ಚಾಗಿ ತಾಳಬಹು ದಾಗಿರುವದು.
15. ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
16. ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
17. ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
18. ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
19. ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
20. ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
21. ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
22. ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
23. ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
24. ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
25. ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
26. ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
27. ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
28. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
29. ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
30. ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
31. ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
32. ಅದೇ ಪ್ರಕಾರ ಒಬ್ಬ ಲೇವಿ ಯೂ ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಓರೆಯಾಗಿ ಹೋದನು.
33. ಆದರೆ ಒಬ್ಬಾನೊಬ್ಬ ಸಮಾರ್ಯದ ವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ನೋಡಿ ಅವನ ಮೇಲೆ ಕನಿಕರಪಟು
34. ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
35. ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
36. ಈ ಮೂವರಲ್ಲಿ ಯಾರು ಆ ಕಳ್ಳರ ನಡುವೆ ಸಿಕ್ಕಿ ಬಿದ್ದವನಿಗೆ ನೆರೆಯವ ನಾದನೆಂದು ನೀನು ಯೋಚಿಸುತ್ತೀ ಎಂದು ಕೇಳಿದ್ದಕ್ಕೆ
37. ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
38. ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
39. ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
40. ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
41. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;
42. ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.

Chapter 11

1. ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
2. ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
3. ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು.
4. ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು.
5. ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
6. ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು
7. ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
8. ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
9. ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
10. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
11. ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ?
12. ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ?
13. ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
14. ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
15. ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
16. ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು.
17. ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
18. ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
19. ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
20. ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
21. ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.
22. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
23. ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
24. ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
25. ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.
26. ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
27. ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
28. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
29. ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
30. ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
31. ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
32. ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
33. ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
34. ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
35. ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
36. ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
37. ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
38. ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
39. ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ
40. ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?
41. ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
42. ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
43. ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
44. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
45. ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
46. ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
47. ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
48. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
49. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
50. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
51. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
52. ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
53. ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.
54. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.

Chapter 12

1. ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
2. ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
3. ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
4. ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
5. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
6. ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
7. ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
8. ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
9. ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
10. ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
11. ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
12. ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
13. ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು.
14. ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
15. ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
16. ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
17. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
18. ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
19. ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
20. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
21. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
22. ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
23. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.
24. ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
25. ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು?
26. ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು?
27. ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
28. ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
29. ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ.
30. ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
31. ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
32. ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
33. ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
34. ಯಾಕಂದರೆ ನಿಮ್ಮ ಸಂಪತ್ತು ಇರುವಲ್ಲಿಯೇ ನಿಮ್ಮ ಹೃದಯವು ಸಹ ಇರುವದು.
35. ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
36. ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
37. ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
38. ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
39. ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
40. ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು.
41. ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ
42. ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
43. ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
44. ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
45. ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
46. ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
47. ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
48. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
49. ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು?
50. ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
51. ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
52. ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು.
53. ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು.
54. ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
55. ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
56. ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
57. ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
58. ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆ
59. ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.

Chapter 13

1. ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
2. ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
3. ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
4. ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
5. ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
6. ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
7. ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
8. ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;
9. ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
10. ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
11. ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
12. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ
13. ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.
14. ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.
15. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
16. ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್‌ ದಿನದಲ್ಲಿ ಬಿಡಿಸಬಾರದೋ ಅಂದನು.
17. ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
18. ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
19. ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
20. ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?
21. ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.
22. ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
23. ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
24. ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
25. ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
26. ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.
27. ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
28. ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
29. ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
30. ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.
31. ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
32. ​ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
33. ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.
34. ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ
35. ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Chapter 14

1. ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
2. ಇಗೋ, ಅಲ್ಲಿ ಜಲೊದರವುಳ್ಳ ಒಬ್ಬ ಮನುಷ್ಯನು ಆತನ ಎದು ರಿನಲ್ಲಿ ಇದ್ದನು.
3. ಆಗ ಯೇಸು ನ್ಯಾಯಶಾಸ್ತ್ರಿಗಳಿಗೂ ಫರಿಸಾಯರಿಗೂ--ಸಬ್ಬತ್‌ ದಿನದಲ್ಲಿ ಸ್ವಸ್ಥಮಾಡುವದು ನ್ಯಾಯವೋ ಎಂದು ಕೇಳಿದನು.
4. ಆದರೆ ಅವರು ಮೌನವಾಗಿದ್ದರು. ಆಗ ಆತನು ಅವನನ್ನು ಕೈಹಿಡಿದು ಸ್ವಸ್ಥಪಡಿಸಿಕಳುಹಿಸಿದನು.
5. ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
6. ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.
7. (ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--
8. ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
9. ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
10. ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
11. ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
12. ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
13. ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;
14. ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
15. ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
16. ಆಗ ಆತನು ಅವನಿಗೆ--ಒಬ್ಬಾನೊಬ್ಬ ಮನುಷ್ಯನು ಒಂದು ದೊಡ್ಡ ಔತಣಮಾಡಿಸಿ ಅನೇಕರನ್ನು ಕರೆದನು.
17. ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
18. ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
19. ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
20. ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು.
21. ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ
22. ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು.
23. ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
24. ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
25. ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--
26. ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
27. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
28. ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
29. ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--
30. ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
31. ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
32. ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
33. ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
34. ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?
35. ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

Chapter 15

1. ​ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
2. ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
3. ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
4. ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
5. ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
6. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
7. ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
8. ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
9. ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
10. ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
11. ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
12. ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
13. ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
14. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
15. ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
16. ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
17. ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
18. ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
19. ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
20. ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
21. ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
22. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
23. ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
24. ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
25. ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
26. ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
27. ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು.
28. ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.
29. ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
30. ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
31. ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.
32. ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.

Chapter 16

1. ತರುವಾಯ ಆತನು ತನ್ನ ಶಿಷ್ಯರಿಗೂ #NAME?
2. ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
3. ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
4. ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು.
5. ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು
6. ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
7. ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
8. ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
9. ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
10. ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
11. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
12. ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
13. ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
14. ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
15. ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
16. ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
17. ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
18. ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
19. ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
20. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
21. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
23. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
24. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
25. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
26. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
27. ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
28. ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು.
29. ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.
30. ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.
31. ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

Chapter 17

1. ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
2. ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
3. ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯನ್ನು ತೆಗೆದುಕೊಳ್ಳಿರಿ; ನಿನ ಸಹೋದರನು ನಿನಗೆ ವಿರೋಧವಾಗಿ ತಪ್ಪು ಮಾಡಿದರೆ ಅವನನ್ನು ಗದರಿಸು; ಅವನು ಮಾನಸಾಂತರಪಟ್ಟರೆ ಅವನನ್ನು ಕ್ಷಮಿಸು.
4. ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.
5. ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.
6. ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
7. ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ?
8. ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
9. ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.
10. ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
11. ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.
12. ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.
13. ಅವರು ತಮ್ಮ ಸ್ವರವೆತ್ತಿ--ಯೇಸುವೇ,ಒಡೆಯನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
14. ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
15. ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ
16. ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.
17. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
18. ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
19. ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
20. ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
21. ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
22. ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
23. ಅವರು ನಿಮಗೆ--ಇಲ್ಲಿ ನೋಡಿರಿ ಇಲ್ಲವೆ ಅಲ್ಲಿ ನೋಡಿರಿ ಎಂದು ಹೇಳಿದರೆ ಅಲ್ಲಿಗೆ ಹೋಗಬೇಡಿರಿ ಇಲ್ಲವೆ ಅವರನ್ನು ಹಿಂಬಾಲಿಸಬೇಡಿರಿ.
24. ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
25. ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
26. ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
27. ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
28. ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
29. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
30. ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
31. ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
32. ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
33. ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
34. ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
35. ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
36. ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
37. ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.

Chapter 18

1. ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
2. ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
3. ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
4. ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
5. ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
6. ಕರ್ತನು--ಈ ಅನ್ಯಾಯಗಾರನಾದ ನ್ಯಾಯಾಧಿ ಪತಿಯು ಅಂದುಕೊಂಡದ್ದನ್ನು ಕೇಳಿರಿ.
7. ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
8. ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
9. ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
10. ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು.
11. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
12. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
13. ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
14. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
15. ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
16. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
17. ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
18. ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
19. ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
20. ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
21. ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
22. ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
23. ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
24. ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
25. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
26. ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
27. ಅದಕ್ಕೆ ಆತನು--ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ ಎಂದು ಹೇಳಿದನು.
28. ಆಗ ಪೇತ್ರನು--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಿದ್ದಕ್ಕೆ
29. ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
30. ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
31. ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
32. ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
33. ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
34. ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
35. ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
36. ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
37. ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು.
38. ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
39. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
40. ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--
41. ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
42. ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.
43. ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.

Chapter 19

1. ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು.
2. ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
3. ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.
4. ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.
5. ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
6. ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
7. ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
8. ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
9. ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.
10. ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
11. ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು.
12. ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
13. ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.
14. ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
15. ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
16. ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
17. ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
18. ಎರಡನೆಯವನು ಬಂದು--ಒಡೆಯನೇ, ನಿನ್ನ ಮೊಹರಿಯಿಂದ ಐದು ಮೊಹರಿಗಳನ್ನು ಸಂಪಾ ದಿಸಿದ್ದೇನೆ ಅಂದನು.
19. ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
20. ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.
21. ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
22. ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
23. ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
24. ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
25. (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.)
26. ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
27. ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
28. ಆತನು ಹೀಗೆ ಹೇಳಿದ ತರುವಾಯ ಮುಂದಾಗಿ ಯೆರೂಸಲೇಮಿಗೆ ಏರಿಹೋದನು.
29. ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
30. ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
31. ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
32. ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
33. ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
34. ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.
35. ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.
36. ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
37. ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
38. ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
39. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
40. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
41. ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
42. ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
43. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
44. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
45. ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ
46. ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
47. ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.
48. ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.

Chapter 20

1. ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
2. ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
3. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ
4. ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
5. ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
6. ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
7. ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು.
8. ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
9. ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
10. ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
11. ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
12. ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
13. ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
14. ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
15. ಅವರು ಅವನನ್ನು ದ್ರಾಕ್ಷೇ ತೋಟದ ಹೊರಗೆಹಾಕಿ ಕೊಂದರು. ಹೀಗಿರಲು ದ್ರಾಕ್ಷೇತೋಟದ ಯಜ ಮಾನನು ಅವರಿಗೆ ಏನು ಮಾಡುವನು?
16. ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
17. ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
18. ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
19. ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
20. ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
21. ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
22. ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
23. ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
24. ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
25. ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು.
26. ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
27. ಇದಲ್ಲದೆ ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು ಆತನ ಬಳಿಗೆ ಬಂದು ಆತನಿಗೆ--
28. ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
29. ಹೀಗೆ ಏಳು ಮಂದಿ ಸಹೋದರರು ಇರಲಾಗಿ ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
30. ಎರಡನೆಯ ವನು ಆಕೆಯನ್ನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
31. ಮೂರನೆಯವನು ಆಕೆಯನ್ನು ಮದುವೆಯಾದನು; ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
32. ಕಡೇ ದಾಗಿ ಆ ಹೆಂಗಸು ಸಹ ಸತ್ತಳು.
33. ಹಾಗಾದರೆ ಪುನರುತ್ಥಾನದಲ್ಲಿ ಆಕೆಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಯಾಕಂದರೆ ಏಳು ಮಂದಿಯೂ ಅವಳನ್ನು ಹೆಂಡತಿ ಯನ್ನಾಗಿ ಮಾಡಿಕೊಂಡಿದ್ದರು ಅಂದರು.
34. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ಲೋಕದ ಮಕ್ಕಳು ಮದುವೆಮಾಡಿಕೊಳ್ಳುತ್ತಾರೆ ಮತ್ತು ಮದುವೆ ಮಾಡಿಕೊಡುತ್ತಾರೆ.
35. ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.
36. ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
37. ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
38. ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
39. ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು.
40. ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
41. ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
42. ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
43. ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
44. ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
45. ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--
46. ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;
47. ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.

Chapter 21

1. ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
2. ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.
3. ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
4. ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
5. ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
6. ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
7. ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
8. ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
9. ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
10. ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
11. ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
12. ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
13. ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.
14. ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
15. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
16. ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
17. ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
18. ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
19. ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
20. ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
21. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
22. ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
23. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
24. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
25. ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
26. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
27. ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
28. ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
29. ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
30. ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
31. ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
32. ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
33. ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
34. ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
35. ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
36. ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
37. ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.
38. ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.

Chapter 22

1. ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
2. ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
3. ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
4. ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
5. ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
6. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
7. ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
8. ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
9. ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.
10. ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
11. ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
12. ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
13. ಅವರು ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ದಮಾಡಿದರು.
14. ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
15. ಆಗ ಆತನು ಅವರಿಗೆ--ನಾನು ಶ್ರಮೆಯನ್ನು ಅನುಭವಿಸು ವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕ ಊಟಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿ ದ್ದೇನೆ
16. ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
17. ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
18. ನಾನು ನಿಮಗೆ ಹೇಳುವ ದೇನಂದರೆ--ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ ಅಂದನು.
19. ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
20. ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
21. ಆದರೂ ಇಗೋ, ನನ್ನನ್ನು ಹಿಡುಕೊಡುವವನ ಕೈ ನನ್ನ ಸಂಗಡ ಮೇಜಿನ ಮೇಲೆ ಇದೆ.
22. ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
23. ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
24. ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
25. ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
26. ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
27. ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
28. ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
29. ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
30. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
31. ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
32. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
33. ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
34. ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
35. ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
36. ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
37. ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
38. ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
39. ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
40. ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
41. ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
42. ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
43. ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
44. ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
45. ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
46. ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
47. ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
48. ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
49. ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
50. ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲ ಕಿವಿಯನ್ನು ಕತ್ತರಿಸಿದನು.
51. ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.
52. ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
53. ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
54. ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
55. ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
56. ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
57. ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.
58. ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
59. ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು.
60. ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
61. ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
62. ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
63. ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
64. ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
65. ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
66. ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
67. ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
68. ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
69. ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
70. ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.
71. ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.

Chapter 23

1. ​ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
2. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
3. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
4. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
5. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
6. ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
7. ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
8. ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
9. ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
10. ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
11. ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
12. ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
13. ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
14. ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
15. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
16. ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
17. ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
18. ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
19. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
20. ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
21. ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.
22. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
23. ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
24. ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
25. ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
26. ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
27. ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
28. ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
29. ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
30. ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
31. ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
32. ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
33. ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
34. ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
35. ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
36. ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
37. ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
38. ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್‌ ಲ್ಯಾಟಿನ್‌ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
39. ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
40. ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
41. ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
42. ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
43. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
44. ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
45. ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
46. ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
47. ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
48. ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
49. ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
50. ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
51. ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
52. ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
53. ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
54. ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
55. ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.
56. ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.

Chapter 24

1. ​ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
2. ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
3. ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ.
4. ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
5. ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
6. ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
7. ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
8. ಆಗ ಅವರು ಆತನ ಮಾತುಗಳನ್ನು ನೆನಪು ಮಾಡಿಕೊಂಡು
9. ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
10. ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
11. ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
12. ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
13. ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
14. ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
15. ಇದಾದ ಮೇಲೆ ಅವರು ಜೊತೆ ಯಾಗಿ ಮಾತನಾಡುತ್ತಾ ತರ್ಕಿಸುತ್ತಾ ಇರಲು ಯೇಸು ತಾನೇ ಅವರನ್ನು ಸವಿಾಪಿಸಿ ಅವರೊಂದಿಗೆ ಹೋದನು.
16. ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.
17. ಆಗ ಆತನು ಅವರಿಗೆ--ನೀವು ಮಾರ್ಗದಲ್ಲಿ ನಡೆಯುತ್ತಾ ವ್ಯಸನವುಳ್ಳವರಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿರುವ ಈ ವಿಷಯಗಳು ಯಾವ ತರದವುಗಳು ಎಂದು ಕೇಳಿದನು.
18. ಆಗ ಅವರಲ್ಲಿ ಕ್ಲಿಯೊಫಾಸ್‌ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
19. ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
20. ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
21. ಆದರೆ ಇಸ್ರಾಯೇಲ್ಯರನ್ನು ವಿಮೋಚಿಸುವಾತನು ಆತನೇ ಎಂದು ನಾವು ನಂಬಿದ್ದೆವು; ಇದಲ್ಲದೆ ಈ ವಿಷಯಗಳು ನಡೆದು ಇದು ಮೂರನೆಯ ದಿನವಾಗಿದೆ;
22. ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು
23. ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು.
24. ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
25. ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
26. ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
27. ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
28. ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
29. ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
30. ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
31. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
32. ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
33. ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
34. ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
35. ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.
36. ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
37. ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
38. ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
39. ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
40. ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
41. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
42. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
43. ಆತನು ತಕ್ಕೊಂಡು ಅವರ ಮುಂದೆ ತಿಂದನು.
44. ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
45. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
46. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
47. ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
48. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
49. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
50. ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
51. ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
52. ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.
53. ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್‌.


Free counters!   Site Meter(April28th2012)