Home Churches About
 

Chapter 1

1. ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
2. ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
3. ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
4. ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
5. ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
6. ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
7. ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
8. ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
9. ಆ ದಿನದಲ್ಲಿ ಹೊಸ್ತಿಲನ್ನು ಹಾರಿ ದಾಟುವವರೆಲ್ಲರನ್ನೂ ತಮ್ಮ ಯಜಮಾನರ ಮನೆ ಗಳನ್ನು ಬಲಾತ್ಕಾರ ಮೋಸಗಳಿಂದ ತುಂಬಿಸುವವರನ್ನೂ ದಂಡಿಸುವೆನು.
10. ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
11. ಮಕ್ತೇಷಿನ ನಿವಾಸಿ ಗಳೇ, ಗೋಳಾಡಿರಿ; ವರ್ತಕರ ಜನರೆಲ್ಲಾ ಸಂಹಾರ ವಾದರು; ಬೆಳ್ಳಿ ಹೊತ್ತವರೆಲ್ಲರೂ ಕಡಿದುಬಿಡಲ್ಪಟ್ಟಿ ದ್ದಾರೆ.
12. ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
13. ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
14. ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
15. ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
16. ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
17. ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.
18. ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.

Chapter 2

1. ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ.
2. ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ.
3. ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
4. ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್‌ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್‌ ಕೀಳಲ್ಪಡುವದು.
5. ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
6. ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
7. ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
8. ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
9. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
10. ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
11. ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
12. ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
13. ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
14. ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.
15. ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.

Chapter 3

1. ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
2. ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
3. ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
4. ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
5. ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
6. ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.
7. ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
8. ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
9. ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
10. ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
11. ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
12. ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
13. ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
14. ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
15. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
16. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
17. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
18. ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ.
19. ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.
20. ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.


Free counters!   Site Meter(April28th2012)