೧ ಯೋಹಾನನು
Chapter 1
1. ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. 2. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). 3. ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು. 4. ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ. 5. ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ. 6. ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. 7. ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. 8. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. 9. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು. 10. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
Chapter 2
1. ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. 2. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ. 3. ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. 4. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ. 5. ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ. 6. ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ. 7. ಸಹೋದರರೇ, ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ; ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ. 8. ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ. 9. ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. 10. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ. 11. ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು. 12. ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ. 13. ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ. 14. ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ. 15. ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. 16. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. 17. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು. 18. ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ. 19. ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು. 20. ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ. 21. ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು. 22. ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ. 23. ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ. 24. ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ. 25. ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ. 26. ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ. 27. ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ 28. ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ. 29. ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
Chapter 3
1. ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. 2. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು. 3. ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ. 4. ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ. 5. ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ. 6. ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ. 7. ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. 8. ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು. 9. ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು. 10. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ. 11. ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ. 12. ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. 13. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. 14. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. 15. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. 16. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. 17. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? 18. ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. 19. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. 20. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. 21. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. 22. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. 23. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ. 24. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Chapter 4
1. ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. 2. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ. 3. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ. 4. ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ. 5. ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. 6. ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ. 7. ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. 8. ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ. 9. ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. 10. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. 11. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. 12. ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. 13. ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ. 14. ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ. 15. ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. 16. ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. 17. ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯ ವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಯಾಕಂದರೆ ಆತನು ಎಂಥವನಾಗಿದ್ದಾನೋ ನಾವು ಅಂಥವ ರಾಗಿಯೇ ಈ ಲೋಕದಲ್ಲಿದ್ದೇವೆ. 18. ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ. 19. ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. 20. ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು? 21. ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
Chapter 5
1. ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ. 2. ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. 3. ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ. 4. ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ. 5. ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು? 6. ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ. 7. ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ. 8. ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ. 9. ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. 10. ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. 11. ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. 12. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ. 13. ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ. 14. ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. 15. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ. 16. ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ 17. ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು. 18. ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ. 19. ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ. 20. ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ. 21. ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
(April28th2012)
|