Home Churches About
 

೨ ಪೇತ್ರನು

Chapter 1

1. ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
2. ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
3. ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
4. ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
5. ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
6. ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
7. ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
8. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
9. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
10. ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
11. ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
12. ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
13. ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
14. ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
15. ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
16. ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
17. ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
18. ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
19. ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
20. ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.
21. ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.

Chapter 2

1. ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
2. ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
3. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
4. ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
5. ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
6. ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7. ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
8. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
9. ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
10. ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
11. ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
12. ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
13. ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
14. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
15. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
16. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
17. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
18. ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
20. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
21. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.
22. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.

Chapter 3

1. ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ.
2. ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
3. ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
4. ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
5. ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
6. ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
7. ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
8. ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
9. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
10. ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
11. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
12. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
13. ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
14. ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
15. ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.
16. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
17. ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.
18. ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್‌.


Free counters!   Site Meter(April28th2012)