Home Churches About
 

Chapter 1

1. ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
2. ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
3. ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
4. ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
5. ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
6. ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
7. ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
8. ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
9. ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
10. ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
11. ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
12. ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್‌ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
13. ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
14. ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
15. ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--
16. ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
17. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.
18. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
19. ಇದು ಯೆರೂಸಲೇಮ್‌ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
20. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
21. ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
22. ಯೋಹಾನನ ಬಾಪ್ತಿಸ್ಮ ಮೊದಲು ಗೊಂಡು ಆತನು ನಮ್ಮಿಂದ ಎತ್ತಲ್ಪಟ್ಟ ದಿನದವರೆಗೆ ನಮ್ಮೊಂದಿಗೆ ಒಬ್ಬನನ್ನು ಆತನ ಪುನರುತ್ಥಾನದ ವಿಷಯವಾಗಿ ಸಾಕ್ಷಿಯಾಗಿರುವಂತೆ ನೇಮಿಸತಕ್ಕದ್ದು.
23. ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು.
24. ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
25. ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.
26. ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.

Chapter 2

1. ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
2. ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3. ಇದಲ್ಲದೆ ಅಲ್ಲಿ ವಿಂಗಡಿಸಲ್ಪಟ್ಟ ನಾಲಿಗೆಗಳು ಬೆಂಕಿಯಂತೆ ಅವರಿಗೆ ಕಾಣಿಸಿಕೊಂಡು ಅವರಲ್ಲಿ ಪ್ರತಿಯೊಬ್ಬನ ಮೇಲೆ ಅದು ಕೂತುಕೊಂಡಿತು.
4. ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
5. ಆಕಾಶದ ಕೆಳಗಿರುವ ಪ್ರತಿಯೊಂದು ಜನಾಂಗದವರೊಳಗಿಂದ (ಬಂದಿದ್ದ) ಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸ ಮಾಡುತ್ತಿದ್ದರು
6. ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.
7. ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?
8. ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?
9. ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
10. ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
11. ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
12. ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
13. ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
14. ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
15. ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.
16. ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--
17. ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
18. ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;
19. ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
20. ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
21. ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
22. ಇಸ್ರಾಯೇಲ್‌ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
23. ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
24. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
25. ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
26. ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು;
27. ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
28. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
29. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
30. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
31. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
32. ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
33. ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
34. ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
35. ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
36. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
37. ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
38. ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
39. ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
40. ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
41. ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
42. ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
43. ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
44. ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
45. ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.
46. ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
47. ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.

Chapter 3

1. ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
2. ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
3. ದೇವಾ ಲಯದೊಳಕ್ಕೆ ಹೋಗುವದಕ್ಕಿದ್ದ ಪೇತ್ರ ಯೋಹಾನ ರನ್ನು ಅವನು ನೋಡಿ ಭಿಕ್ಷೆ ಬೇಡಿದನು.
4. ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.
5. ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು.
6. ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
7. ಪೇತ್ರನು ಅವನ ಬಲಗೈಯನ್ನು ಹಿಡಿದು ಎತ್ತಿದನು; ಕೂಡಲೆ ಅವನ ಪಾದಗಳೂ ಹರಡಿನ ಎಲುಬುಗಳೂ ಬಲವನ್ನು ಹೊಂದಿದವು.
8. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
9. ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
10. ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
11. ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
12. ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್‌ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?
13. ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
14. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
15. ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
16. ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು.
17. ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
18. ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
19. ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
20. ಇದಲ್ಲದೆ ಮೊದಲು ನಿಮಗೆ ಸಾರಲ್ಪ ಟ್ಟಂಥ ಯೇಸು ಕ್ರಿಸ್ತನನ್ನು ಆತನು ಕಳುಹಿಸುವನು.
21. ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
22. ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
23. ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
24. ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.
25. ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.
26. ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

Chapter 4

1. ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
2. ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
3. ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
4. ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
5. ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
6. ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
7. ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
8. ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
9. ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
10. ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
11. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
12. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
13. ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
14. ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
15. ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
16. ಈ ಮನುಷ್ಯರಿಗೆ ನಾವೇನು ಮಾಡೋಣ? ನಿಜ ವಾಗಿಯೂ ಅವರ ಮೂಲಕ ನಡೆದ ಪ್ರಸಿದ್ಧವಾದ ಒಂದು ಅದ್ಭುತಕಾರ್ಯವು ಯೆರೂಸಲೇಮಿನಲ್ಲಿ ವಾಸಮಾಡುವವರಿಗೆಲ್ಲಾ ಗೊತ್ತಾಗಿರುವದರಿಂದ ನಾವು ಅದನ್ನು ಅಲ್ಲಗಳೆಯಲಾರೆವು.
17. ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
18. ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
19. ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
20. ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
21. ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
22. ಸ್ವಸ್ಥಪಡಿಸುವ ಈ ಅದ್ಭುತಕಾರ್ಯದಿಂದ ಗುಣಹೊಂದಿದ ಆ ಮನುಷ್ಯ ನಿಗೆ ನಾಲ್ವತ್ತು ವರುಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
23. ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
24. ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
25. ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
26. ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
27. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು
28. ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
29. ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
30. ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
31. ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
32. ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
33. ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
34. ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
35. ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
36. ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)
37. ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

Chapter 5

1. ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
2. ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
3. ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
4. ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
5. ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
6. ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
7. ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
8. ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
9. ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
10. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
11. ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
12. ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
13. ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
14. ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
15. ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
16. ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
17. ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
18. ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
19. ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
20. ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
21. ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್‌ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
22. ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
23. ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
24. ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
25. ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
26. ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
27. ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
28. ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
29. ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
30. ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
31. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
32. ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
33. ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
34. ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
35. ಇಸ್ರಾಯೇಲ್‌ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
36. ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
37. ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
38. ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
39. ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
40. ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
41. ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
42. ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.

Chapter 6

1. ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
2. ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
3. ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
4. ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
5. ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
6. ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
7. ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
8. ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
9. ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
10. ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
11. ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
12. ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
13. ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
14. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.
15. ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.

Chapter 7

1. ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.
2. ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
3. ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.
4. ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
5. ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
6. ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
7. ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.
8. ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
9. ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
10. ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
11. ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
12. ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
13. ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
14. ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
15. ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
16. ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
17. ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
18. ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
19. ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
20. ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
21. ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
22. ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
23. ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
24. ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
25. ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
26. ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
27. ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
28. ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.
29. ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‌ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
30. ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
31. ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.
32. ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
33. ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
34. ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
35. ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
36. ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
37. ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್‌ ಜನರಿಗೆ ಹೇಳಿದ ಆ ಮೋಶೆಯು ಇವನೇ.
38. ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
39. ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
40. ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
41. ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
42. ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
43. ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
44. ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
45. ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
46. ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
47. ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
48. ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
49. ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
50. ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
51. ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
52. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
53. ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
54. ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
55. ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
56. ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
57. ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
58. ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
59. ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,
60. ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.

Chapter 8

1. ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
2. ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
3. ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
4. ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
5. ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
6. ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
7. ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
8. ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
9. ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
10. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
11. ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
12. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
13. ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
14. ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
15. ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.
16. (ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).
17. ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
18. ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
19. ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.
20. ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
21. ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
22. ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
23. ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
24. ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
25. ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
26. ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
27. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
28. ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;
29. ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು.
30. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
31. ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
32. ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
33. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
34. ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು.
35. ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
36. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
37. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
38. ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು.
39. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.
40. ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

Chapter 9

1. ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
2. ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
3. ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.
4. ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
5. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
6. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
7. ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು.
8. ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
9. ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
10. ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.
11. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.
12. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
13. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
14. ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
15. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
16. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
17. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
18. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
19. ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು.
20. ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
21. ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು.
22. ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
23. ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
24. ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
25. ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
26. ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
27. ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು.
28. ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
29. ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
30. ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
31. ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
32. ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
33. ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
34. ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
35. ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
36. ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
37. ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.
38. ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು.
39. ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
40. ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
41. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
42. ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.
43. ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.

Chapter 10

1. ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
2. ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
3. ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
4. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
5. ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.
6. ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
7. ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
8. ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.
9. ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
10. ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
11. ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
12. ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು.
13. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು.
14. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
15. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
16. ಹೀಗೆ ಮೂರು ಸಾರಿ ಆಯಿತು. ತರು ವಾಯ ಆ ಪಾತ್ರೆಯು ಪುನಃ ಆಕಾಶದೊಳಗೆ ಸೇರಿ ಕೊಂಡಿತು.
17. ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
18. ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
19. ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
20. ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
21. ಪೇತ್ರನು ಕೆಳಗಿಳಿದು ಕೊರ್ನೇಲ್ಯನು ಕಳುಹಿಸಿದ ಆ ಮನುಷ್ಯರ ಬಳಿಗೆ ಬಂದು--ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು
22. ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
23. ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
24. ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
25. ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
26. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
27. ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು
28. ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
29. ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
30. ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
31. ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
32. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
33. ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
34. ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
35. ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
36. ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
37. ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
38. ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
39. ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
40. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
41. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
42. ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
43. ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
44. ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.
45. ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
46. ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
47. ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--
48. ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.

Chapter 11

1. ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬದನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.
2. ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
3. ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
4. ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ--
5. ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು.
6. ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.
7. ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.
8. ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
9. ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
10. ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
11. ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
12. ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
13. ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;
14. ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
15. ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು.
16. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
17. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
18. ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
19. ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
20. ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
21. ಕರ್ತನ ಹಸ್ತವು ಅವರೊಂದಿಗಿದ್ದದ ರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿ ಕೊಂಡರು.
22. ಈ ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
23. ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
24. ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
25. ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
26. ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
27. ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
28. ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
29. ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.
30. ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.

Chapter 12

1. ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
2. ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
3. ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
4. ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
5. ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
6. ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
7. ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
8. ಆ ದೂತನು ಅವನಿಗೆ--ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೆಯೇ ಮಾಡಿದನು. ಆ ದೂತನು ಅವನಿಗೆ ನಿನ್ನ ಮೇಲಂಗಿ ಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.
9. ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ಅವನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ದರ್ಶನವೆಂದು ನೆನಸಿದನು.
10. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.
11. ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
12. ತರುವಾಯ ಅವನು ಯೋಚನೆ ಮಾಡಿಕೊಂಡು ಮಾರ್ಕನೆನಿಸಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.
13. ಪೇತ್ರನು ದ್ವಾರದ ಬಾಗಿಲನ್ನು ತಟ್ಟಿದಾಗ ರೋದೆ ಎಂಬ ಒಬ್ಬ ಹುಡುಗಿಯು ಕೇಳುವದಕ್ಕೆ ಬಂದಳು.
14. ಅವಳು ಪೇತ್ರನ ಧ್ವನಿಯನ್ನು ತಿಳಿದಾಗ ಸಂತೋಷದ ನಿಮಿತ್ತದಿಂದಲೇ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ--ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ ಎಂದು ಹೇಳಿದಳು.
15. ಅವರು ಅವಳಿಗೆ--ನಿನಗೆ ಹುಚ್ಚು ಹಿಡಿದದೆ ಎಂದು ಹೇಳಿದರು. ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳಿದ್ದಕ್ಕೆ ಅವರು--ಅವನು ಪೇತ್ರನ ದೂತನು ಅಂದರು.
16. ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
17. ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
18. ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
19. ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
20. ತೂರ್‌ ಸೀದೋನ್‌ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
21. ಗೊತ್ತು ಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿದವನಾಗಿ ತನ್ನ ಸಿಂಹಾಸನದ ಮೇಲೆ ಕೂತುಕೊಂಡು ಅವರಿಗೆ ಉಪನ್ಯಾಸ ಮಾಡಿ ದನು.
22. ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
23. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
24. ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.
25. ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.

Chapter 13

1. ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
2. ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
3. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
4. ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
5. ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
6. ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
7. ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
8. ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
9. ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
10. ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
11. ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
12. ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
13. ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
14. ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
15. ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
16. ಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್‌ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
17. ಈ ಇಸ್ರಾಯೇಲ್‌ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
18. ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
19. ಕಾನಾನ್‌ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
20. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
21. ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
22. ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
23. ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
24. ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್‌ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
25. ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
26. ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
27. ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
28. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
29. ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
30. ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
31. ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
32. ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
33. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
34. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
35. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
36. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
37. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
38. ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
39. ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
40. ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
41. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
42. ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
43. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
44. ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
45. ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
46. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
47. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
48. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
49. ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
50. ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
51. ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.
52. ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.

Chapter 14

1. ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
2. ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
3. ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
4. ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
5. ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
6. ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
7. ಅಲ್ಲಿ ಸುವಾರ್ತೆಯನ್ನು ಸಾರಿದರು.
8. ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
9. ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
10. ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
11. ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
12. ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು;
13. ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.
14. ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
15. ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
16. ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
17. ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
18. ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
19. ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
20. ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
21. ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
22. ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
23. ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
24. ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು
25. ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು
26. ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
27. ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.
28. ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

Chapter 15

1. ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
2. ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
3. ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
4. ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
5. ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
6. ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
7. ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
8. ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
9. ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10. ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
11. ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
12. ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
13. ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
14. ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15. ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--
16. ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
17. ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
18. ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
19. ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
20. ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
21. ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
22. ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
23. ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
24. ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
25. ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
26. ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
27. ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
28. ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
29. ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
30. ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
31. ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
32. ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
33. ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
34. ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
35. ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
36. ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
37. ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
38. ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
39. ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
40. ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.
41. ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.

Chapter 16

1. ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
2. ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
3. ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
4. ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
5. ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
6. ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
7. ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
8. ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
9. ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
10. ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
11. ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
12. ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
13. ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
14. ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
15. ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
16. ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
17. ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
18. ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
19. ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
20. ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
21. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
22. ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
23. ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
24. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
25. ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
26. ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
27. ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
28. ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
29. ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
30. ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
31. ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
32. ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.
33. ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
34. ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
35. ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
36. ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
37. ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
38. ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
39. ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.
40. ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.

Chapter 17

1. ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
2. ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್‌ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
3. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
4. ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
5. ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
6. ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
7. ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
8. ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
9. ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
10. ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
11. ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
12. ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್‌ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
13. ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
14. ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
15. ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
16. ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.
17. ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಸಂಗಡಲೂ ಭಕ್ತಿವಂತರ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ತನ್ನನ್ನು ಸಂಧಿಸಿದವರ ಸಂಗಡಲೂ ವಾದಿಸಿದನು.
18. ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
19. ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
20. ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
21. (ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).
22. ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.
23. ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
24. ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
25. ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
26. ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
27. ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
28. ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
29. ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
30. ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
31. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
32. ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
33. ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
34. ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.

Chapter 18

1. ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
2. ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
3. ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
4. ಅವನು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
5. ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
6. ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
7. ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
8. ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
9. ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
10. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
11. ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
12. ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
13. ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
14. ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
15. ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
16. ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.
17. ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
18. ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
19. ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
20. ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
21. ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
22. ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
23. ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
24. ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
25. ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
26. ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
27. ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;
28. ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.

Chapter 19

1. ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
2. ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
3. ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
4. ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
5. ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
6. ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
7. ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
8. ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
9. ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
10. ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
11. ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
12. ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
13. ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
14. ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
15. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
16. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
17. ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
18. ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
19. ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
20. ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
21. ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್‌ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
22. ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
23. ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
24. ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
25. ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
26. ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
27. ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
28. ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
29. ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
30. ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
31. ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
32. ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
33. ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
34. ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
35. ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
36. ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
37. ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
38. ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
39. ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
40. ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
41. ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.

Chapter 20

1. ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
2. ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್‌ಗೆ ಬಂದನು.
3. ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
4. ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
5. ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
6. ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
7. ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
8. ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
9. ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.
10. ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು.
11. ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.
12. ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
13. ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.
14. ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
15. ಅಲ್ಲಿಂದ ಹೊರಟು ಮರುದಿನ ಖೀಯೊಸ್‌ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
16. ಯಾಕಂದರೆ ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮದ ದಿವಸ ಯೆರೂಸಲೇಮಿನಲ್ಲಿರಬೇಕೆಂದು ಅವಸರ ಪಡುತ್ತಾ ಇದ್ದದರಿಂದ ಆಸ್ಯದಲ್ಲಿ ಕಾಲವನ್ನು ಕಳೆಯು ವದಕ್ಕೆ ಮನಸ್ಸಿಲ್ಲದೆ ಸಮುದ್ರ ಪ್ರಯಾಣವಾಗಿ ಎಫೆಸವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿ ಕೊಂಡಿದ್ದನು.
17. ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
18. ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
19. ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.
20. ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
21. ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
22. ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
23. ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
24. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
25. ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
26. ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
27. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
28. ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
29. ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
30. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
31. ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
32. ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
33. ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
34. ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
35. ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
36. ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.
37. ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.
38. ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.

Chapter 21

1. ಇದಾದ ಮೇಲೆ ನಾವು ಅವರನ್ನು ಬಿಟ್ಟು ಸಮುದ್ರಪ್ರಯಾಣವಾಗಿ ನೆಟ್ಟಗೆ ಕೋಸ್‌ಗೆ ಬಂದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಸೇರಿದೆವು.
2. ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು.
3. ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್‌ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.
4. ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
5. ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
6. ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
7. ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.
8. ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
9. ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.
10. ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.
11. ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
12. ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
13. ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
14. ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.
15. ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
16. ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.
17. ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
18. ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
19. ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
20. ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
21. ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
22. ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.
23. ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
24. ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
25. ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
26. ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
27. ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
28. ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
29. (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
30. ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
31. ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
32. ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
33. ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
34. ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.
35. ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
36. ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
37. ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?
38. ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
39. ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.
40. ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--

Chapter 22

1. ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
2. (ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು--
3. ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
4. ನಾನು ಈ ಮಾರ್ಗವನ್ನು ಹಿಡಿದ ಗಂಡಸರನ್ನೂ ಹೆಂಗಸರನ್ನೂ ಬಂಧಿಸಿ ಸೆರೆಮನೆ ಯೊಳಗೆ ಹಾಕಿಸುತ್ತಾ ಅವರನ್ನು ಕೊಲ್ಲುವ ಮಟ್ಟಿಗೂ ಹಿಂಸಿಸಿದೆನು.
5. ಇದಕ್ಕೆ ಮಹಾಯಾಜಕನೂ ಹಿರೀಸಭೆ ಯವರೆಲ್ಲರೂ ನನಗೆ ಸಾಕ್ಷಿಗಳಾಗಿದ್ದಾರೆ. ಇವರಿಂದಲೇ ಅಲ್ಲಿದ್ದ ಸಹೋದರರಿಗೆ ನಾನು ಪತ್ರಗಳನ್ನು ಪಡೆದು ದಮಸ್ಕದಲ್ಲಿದ್ದವರನ್ನು ಬಂಧಿಸಿ ಯೆರೂಸಲೇಮಿಗೆ ತಂದು ಶಿಕ್ಷಿಸುವದಕ್ಕಾಗಿ ನಾನು ಅಲ್ಲಿಗೆ ಹೋದೆನು.
6. ತರುವಾಯ ನಾನು ಪ್ರಯಾಣಮಾಡುತ್ತಾ ಸುಮಾರು ಮಧ್ಯಾಹ್ನದ ಸಮಯದಲ್ಲಿ ದಮಸ್ಕದ ಹತ್ತಿರ ಬಂದಾಗ ಫಕ್ಕನೆ ಆಕಾಶದಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲೂ ಹೊಳೆಯಿತು.
7. ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
8. ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
9. ಆಗ ನನ್ನೊಂದಿಗಿದ್ದವರು ನಿಜವಾಗಿಯೂ ಆ ಬೆಳಕನ್ನು ನೋಡಿ ಭಯಪಟ್ಟರು; ಆದರೆ ನನ್ನೊಂದಿಗೆ ಮಾತನಾಡಿದ ಆತನ ಧ್ವನಿಯನ್ನು ಅವರು ಕೇಳಲಿಲ್ಲ.
10. ನಾನು--ಕರ್ತನೇ, ನಾನೇನು ಮಾಡಬೇಕು ಎಂದು ಕೇಳಿದೆನು; ಅದಕ್ಕೆ ಕರ್ತನು ನನಗೆ--ನೀನೆದ್ದು ದಮಸ್ಕದೊಳಕ್ಕೆ ಹೋಗು; ನಿನಗೆ ನೇಮಿಸಲ್ಪ ಟ್ಟವುಗಳೆಲ್ಲವು ಅಲ್ಲಿ ನಿನಗೆ ತಿಳಿಸಲ್ಪಡುವವು ಎಂದು ಹೇಳಿದನು.
11. ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
12. ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
13. ಅವನು ನನ್ನ ಬಳಿಗೆ ಬಂದು ನಿಂತು--ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ನಾನು ಅವನನ್ನು ನೋಡಿದೆನು.
14. ಆಗ ಅವನು--ನಮ್ಮ ಪಿತೃಗಳ ದೇವರ ಚಿತ್ತವನ್ನು ನೀನು ತಿಳುಕೊಳ್ಳು ವಂತೆಯೂ ಆ ನೀತಿವಂತನನ್ನು ನೋಡುವಂತೆಯೂ ಆತನ ಬಾಯಿಂದ ಬಂದ ಸ್ವರವನ್ನು ಕೇಳುವಂತೆಯೂ ಆತನು ನಿನ್ನನ್ನು ಆರಿಸಿಕೊಂಡಿದ್ದಾನೆ.
15. ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.
16. ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
17. ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
18. ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
19. ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
20. ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
21. ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
22. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
23. ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ
24. ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
25. ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್‌ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
26. ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್‌ನವನು ಎಂದು ಹೇಳಿದನು.
27. ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್‌ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
28. ಅದಕ್ಕೆ ಮುಖ್ಯ ನಾಯಕನು ಪ್ರತ್ಯುತ್ತರವಾಗಿ--ನಾನು ಬಹಳ ಹಣ ಕೊಟ್ಟು ಪೌರತ್ವವನ್ನು ಪಡೆದುಕೊಂಡಿರುವೆನು ಅಂದನು. ಅದಕ್ಕೆ ಪೌಲನು--ನಾನಾದರೋ ಹುಟ್ಟು ಪೌರತ್ವನು ಎಂದು ಹೇಳಿದನು.
29. ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್‌ನವನೆಂದು ತಿಳಿದು ಭಯಪಟ್ಟನು.
30. ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ

Chapter 23

1. ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.
2. ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
3. ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.
4. ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು.
5. ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
6. ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
7. ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.
8. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.
9. ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
10. ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
11. ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
12. ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
13. ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು.
14. ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
15. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
16. ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
17. ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
18. ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.
19. ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
20. ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
21. ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
22. ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.
23. ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
24. ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
25. ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:-
26. ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
27. ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
28. ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
29. ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
30. ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
31. ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.
32. ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
33. ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
34. ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--
35. ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.

Chapter 24

1. ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
2. ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
3. ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ.
4. ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
5. ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
6. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
7. ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,
8. ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
9. ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
10. ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
11. ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
12. ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.
13. ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
14. ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ.
15. ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
16. ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
17. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
18. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
19. ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು.
20. ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.
21. ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.
22. ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
23. ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
24. ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
25. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
26. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.
27. ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.

Chapter 25

1. ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
2. ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.
3. ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
4. ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
5. ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.
6. ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
7. ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.
8. ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
9. ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
10. ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.
11. ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರ
12. ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.
13. ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.
14. ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.
15. ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
16. ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರ
17. ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
18. ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.
19. ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
20. ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
21. ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
22. ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.
23. ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.
24. ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು
25. ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.
26. ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.
27. ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.

Chapter 26

1. ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
2. ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
3. ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
4. ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.
5. ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
6. ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
7. ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
8. ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
9. ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
10. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
11. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
12. ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
13. ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
14. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
15. ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
16. ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
17. ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
18. ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
19. ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
20. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
21. ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
22. ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
23. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
24. ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
25. ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
26. ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
27. ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
28. ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
29. ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
30. ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
31. ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
32. ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.

Chapter 27

1. ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
2. ನಾವು ಆಸ್ಯದ ತೀರಗಳ ಮಾರ್ಗವಾಗಿ ಪ್ರಯಾಣಮಾಡ ಬೇಕೆಂಬ ಉದ್ದೇಶದಿಂದ ಅದ್ರಮಿತ್ತಿಯ ಹಡಗನ್ನು ಹತ್ತಿ ಸಮುದ್ರ ಪ್ರಯಾಣವನ್ನು ಪ್ರಾರಂಭಿಸಿದೆವು ಆಗ ಥೆಸಲೊನೀಕದ ಮಕೆದೋನ್ಯದವನಾದ ಅರಿ ಸ್ತಾರ್ಕನು ನಮ್ಮೊಂದಿಗೆ ಇದ್ದನು.
3. ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
4. ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
5. ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
6. ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.
7. ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
8. ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
9. ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
10. ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.
11. ಆದರೂ ಪೌಲನು ಹೇಳಿದವುಗಳಿಗಿಂತ ಹೆಚ್ಚಾಗಿ ಹಡಗಿನ ನಾಯಕನೂ ಯಜಮಾನನೂ ಆಗಿದ್ದವನನ್ನು ಶತಾಧಿಪತಿಯು ನಂಬಿದನು.
12. ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ
13. ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
14. ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.
15. ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು
16. ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
17. ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
18. ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
19. ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
20. ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
21. ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
22. ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
23. ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
24. ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
25. ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
26. ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
27. ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
28. ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
29. ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
30. ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
31. ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
32. ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
33. ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
34. ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
35. ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
36. ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.
37. ಎಲ್ಲರೂ ಸೇರಿ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.
38. ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
39. ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
40. ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
41. ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
42. ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.
43. ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂ
44. ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.

Chapter 28

1. ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
2. ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
3. ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
4. ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
5. ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
6. ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
7. ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
8. ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
9. ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.
10. ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
11. ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
12. ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು.
13. ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.
14. ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್‌ ಕಡೆಗೆ ಹೊರಟೆವು.
15. ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
16. ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
17. ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ
18. ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
19. ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
20. ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
21. ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.
22. ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
23. ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
24. ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
25. ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
26. ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
27. ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
28. ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
29. ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.
30. ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.
31. ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.


Free counters!   Site Meter(April28th2012)