Chapter 1
1. ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ 2. ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 3. ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ. 4. ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ; 5. ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ. 6. ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ. 7. ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು. 8. ಆತ್ಮನಲ್ಲಿರುವ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನೂ ಅವನೇ. 9. ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು 10. ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ 11. ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ 12. ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ. 13. ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು. 14. ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು. 15. ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ. 16. ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು. 17. ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ. 18. ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ. 19. ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು. 20. ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. 21. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ. 22. ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ. 23. ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ 24. ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ. 25. ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು. 26. ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ; 27. ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ. 28. ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ. 29. ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
Chapter 2
1. ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ. 2. ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ; 3. ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ. 4. ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ. 5. ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ. 6. ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ. 7. ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ. 8. ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ. 9. ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ. 10. ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ. 11. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ. 12. ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ. 13. ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. 14. ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು. 15. ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು. 16. ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ. 17. ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ. 18. ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ. 19. ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ. 20. ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ 21. ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? 22. (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ); 23. ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
Chapter 3
1. ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. 2. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. 3. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. 4. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ. 5. ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. 6. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ. 7. ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ. 8. ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ. 9. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ? 10. ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ. 11. ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ. 12. ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ. 14. ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ. 15. ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ. 16. ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. 17. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. 18. ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. 19. ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ. 20. ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. 21. ತಂದೆಗಳೇ, ನಿಮ್ಮ ಮಕ್ಕಳು ಮನಗುಂದದಂತೆ ಅವರನ್ನು ಕೆಣಕಿ ಕೋಪವನ್ನೆಬ್ಬಿಸ ಬೇಡಿರಿ. 22. ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ. 23. ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ; 24. ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ. 25. ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
Chapter 4
1. ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ. 2. ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ. 3. ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ; 4. ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ; 5. ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ. 6. ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ. 7. ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು. 8. ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ 9. ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. 10. ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ. 11. ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ. 12. ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ. 13. ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ. 14. ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. 15. ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ. 16. ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ. 17. ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ. 18. ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
(April28th2012)
|